ಶಿರಾಳಕೊಪ್ಪ ಹತ್ತಿರದ ನೇರಲಗಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು.  
ನ್ಯೂಸ್

ಉ್ರಗರ ದಾಳಿಗೆ ಸೈನಿಕರ ಪ್ರತ್ಯುತ್ತರ

ಶಿವಕುಮಾರ ಎಸ್.ಪಿ.

ಶಿರಾಳಕೊಪ್ಪ: ಪ್ರತೀಕಾರದ ದಾಳಿಗೆ ವಿರಾಮ ನೀಡಲಾಗಿದೆಯೇ ಹೊರತು ಸಂಪೂರ್ಣ ಸ್ಥಗಿತವಾಗಿಲ್ಲ. ಮುಂದಿನ ದಿನಗಳಲ್ಲಿ ಉಗ್ರರು ದಾಳಿ ಮಾಡಿದರೆ ಪಾಕಿಸ್ತಾನವನ್ನು ನಿರ್ನಾಮ ಮಾಡುವ ಶಪಥವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಪಟ್ಟಣದ ಹತ್ತಿರದ ನೇರಲಗಿ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಯೋಧರಿಗೆ ಗೌರವ ಕೊಡುವ ಉದ್ದೇಶದಿಂದ ಬಿಜೆಪಿ ತಿರಂಗಾ ಯಾತ್ರೆ ಮಾಡುತ್ತಿದೆ. ಇದು ಪಕ್ಷಾತೀತ ಕಾರ್ಯಕ್ರಮ. ಮೆರವಣಿಗೆಯಲ್ಲಿ ರಾಷ್ಟ್ರಧ್ವಜ ಮಾತ್ರ ಇರಬೇಕು ಎಂದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಭದ್ರಾವತಿ-ಚಿಕ್ಕಜಾಜೂರು ಮಧ್ಯೆ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಸರ್ವೇ ಕಾರ್ಯ ನಡೆಸಲು ಕೇಂದ್ರ ಸರ್ಕಾರ 2 ಕೋಟಿ ರೂ. ಅನುದಾನಕ್ಕೆ ಅನುಮೋದನೆ ನೀಡಿದೆ. ಮುಂದಿನ ದಿನಗಳಲ್ಲಿ ಈ ರೈಲ್ವೆ ಲೈನಿಂಗ್ ಶಿವಮೊಗ್ಗದ ಜನರಿಗೆ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ತಿಳಿಸಿದರು.

ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ತಾಲೂಕು ಬಿಜೆಪಿ ಅಧ್ಯಕ್ಷ ಹನುಮಂತಪ್ಪ, ಟೌನ್ ಬಿಜೆಪಿ ಅಧ್ಯಕ್ಷ ಚನ್ನವೀರಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ಸುಧೀರ್, ಮಳವಳ್ಳಿ ಚಂದ್ರಶೇಖರ್ ಇತರರಿದ್ದರು.