ನ್ಯೂಸ್

ಏಕಾಏಕಿ ಬಂದು ಪತ್ನಿ ಮೃತಪಟ್ಟಿದ್ದಾಳೆ ಎಂದ ಪತಿ; ಸಾವಿನ ಸುತ್ತ ಹಲವು ಅನುಮಾನ

lakshmihegde

ಬೆಂಗಳೂರು: ನೆಲಮಂಗಲದ ಅರಿಶಿನಕುಂಟೆಯಲ್ಲಿ 23ವರ್ಷದ ಗೃಹಿಣಿಯೋರ್ವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಮಧುಗಿರಿ ಮೂಲದ ರಮ್ಯಾ ಮೃತೆ. ಎರಡು ವರ್ಷಗಳ ಹಿಂದೆ ಮಂಡ್ಯ ಮೂಲದ ಬೋರ ಶೆಟ್ಟಿ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದಳು.ಇವರಿಬ್ಬರೂ ನೆಲಮಂಗಲದ ಅರಿಶಿನಕುಂಟೆಯಲ್ಲಿ ವಾಸವಾಗಿದ್ದರು.

ಇಂದು ಬೆಳಗ್ಗೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಆಕೆಯ ಪತಿ ತಿಳಿಸಿದ್ದಾನೆ. ಆದರೆ ರಮ್ಯಾ ಪಾಲಕರು ಸಾವಿನ ಬಗ್ಗೆ ತೀವ್ರ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ನೆಲಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೋರಶೆಟ್ಟಿಯನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.(ದಿಗ್ವಿಜಯ ನ್ಯೂಸ್​)