ನ್ಯೂಸ್

ಎರಡನೇ ಸುತ್ತಿನ ವಿಚಾರಣೆಗೆ ಆಗಮಿಸಿದ ಸೋನಿಯಾ; ಪ್ರಿಯಾಂಕಾ, ರಾಹುಲ್ ಕೂಡ ಹಾಜರು..

ನವದೆಹಲಿ: ನ್ಯಾಷನಲ್ ಹೆರಾಲ್ಡ್​ ಹಗರಣ ಪ್ರಕರಣದಲ್ಲಿ ಸಿಲುಕಿರುವ ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ ಇಂದು ಮತ್ತೊಮ್ಮೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದು, ಅವರೊಂದಿಗೆ ಮಕ್ಕಳಿಬ್ಬರೂ ಜೊತೆಯಾಗಿದ್ದಾರೆ.

ಎರಡನೇ ಸುತ್ತಿನ ವಿಚಾರಣೆಗಾಗಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾಧ್ರಾ ಇದೀಗ ದೆಹಲಿಯ ಜಾರಿ ನಿರ್ದೇಶನಾಲಯದ ಕಚೇರಿಗೆ ಇದೀಗ ಆಗಮಿಸಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುವ ಮೂಲಕ ಈ ವಿಚಾರಣೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಲಾರಂಭಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್​ ನಾಯಕರು ಮೌನ ಪ್ರತಿಭಟನೆ ಮಾಡುತ್ತಿದ್ದು, ತಮ್ಮ ನಾಯಕಿ ಸೋನಿಯಾ ಗಾಂಧಿ ಬೆಂಬಲಕ್ಕೆ ನಿಂತಿದ್ದಾರೆ. "ಅವರು ಪ್ರತಿಪಕ್ಷವನ್ನು ಶೋಷಣೆಗೆ ಒಳಪಡಿಸುತ್ತಿದ್ದಾರೆ. ನಾವು ಇದರ ವಿರುದ್ಧ ಹೋರಾಡುತ್ತೇವೆ. ನಾವು ಸೋನಿಯಾ-ರಾಹುಲ್ ಬೆಂಬಲಕ್ಕಿದ್ದೇವೆ" ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.