ನ್ಯೂಸ್

ಬಾಂಗ್ಲಾ ಪ್ರಧಾನಿ ಭೇಟಿಯಾದ ಸೋನಿಯಾ ಗಾಂಧಿ

ನವದೆಹಲಿ: ಸೋನಿಯಾ ಗಾಂಧಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾದರು.

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸಮಾರಂಭಕ್ಕೆ ಬಾಂಗ್ಲಾದೇಶದ ಪ್ರಧಾನಿ ಬಂದಿದ್ದರು. ಆಗ ಶೇಖ್ ಹಸೀನಾ ಅವರನ್ನು ನೆಹರು ಕುಟುಂಬ ಹಾಗೂ ಕಾಂಗ್ರೆಸ್ ಮುಖಂಡರು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಎರಡು ಕುಟುಂಬಗಳ ನಡುವಿನ ಬಾಂಧವ್ಯವನ್ನು ಹಸೀನಾ ಸ್ಮರಿಸಿದರು. ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಬಾಂಗ್ಲಾದೇಶದ ಪ್ರಧಾನಿಯನ್ನು ಪ್ರೀತಿಯಿಂದ ಅಪ್ಪಿಕೊಂಡು ಆತ್ಮೀಯತೆ ತೋರಿದರು.