ಬೆಂಗಳೂರಿನ ಕಾಲೇಜು ಕಾರ್ಯಕ್ರಮವೊಂದರಲ್ಲಿ ಅಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಥಮ ಮಾಹಿತಿ ವರದಿ(FIR) ರದ್ದುಪಡಿಸುವಂತೆ ಕೋರಿ ಗಾಯಕ ಸೋನು ನಿಗಮ್ ಮಂಗಳವಾರ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಇದೇ ಏ.25-26 ರಂದು ನಗರದ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಗಮ್ ಕನ್ನಡಿಗ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.
ಮಂಗಳವಾರ ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ಪೀಠದ ಮುಂದೆ ಬಂದಿದ್ದು, ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿದೆ. ಕನ್ನಡ ಪರ ಸಂಘಟನೆಗಳು ನೀಡಿದ ದೂರಿನ ಮೇರೆಗೆ ಮೇ.3 ರಂದು ಸೋನು ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಇದನ್ನೂ ಓದಿ:Nelamangala: ಶಾರ್ಟ್ ಸರ್ಕ್ಯೂಟ್ನಿಂದ ಆಯಿಲ್ ಗೋದಾಮು ಬೆಂಕಿಗಾಹುತಿ: ಕೋಟ್ಯಂತರ ರೂ. ನಷ್ಟ, ಸ್ಥಳೀಯರಲ್ಲಿ ಆತಂಕ
ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿ ಸೋನ್ ನಿಗಮ್ ಗಾಯನ ಮಾಡುತ್ತಿದ್ದ ಸಮಯದಲ್ಲಿ ಕೆಲವರು, ಕನ್ನಡ, ಕನ್ನಡ(ಕನ್ನಡ ಹಾಡು ಹೇಳಿ) ಎಂದಿದ್ದಕ್ಕೆ ಸೋನು ನಿಗಮ್ ಏಕಾಏಕಿ ಗರಂ ಆಗಿದ್ದಾರೆ. ಮುಂದುವರೆದು, ''ಕನ್ನಡ.. ಕನ್ನಡ.. ಇದೇ ಕಾರಣ.. ಪಹಲ್ಗಾಮ್‌ನಲ್ಲಿ ಆಗಿದ್ಯಲ್ಲ.. ಅದಕ್ಕೆ ಇದೇ ಕಾರಣ. ಈಗ ನೀವು ಏನು ಮಾಡಿದ್ರಲ್ಲ.. ಅದೇ ಕಾರಣ!'' ಎಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.