ನ್ಯೂಸ್

ಬಾಂಗ್ಲಾದಲ್ಲಿನ ಭಾರತೀಯರನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ; ಸೋನು ಸೂದ್​​​

ಮುಂಬೈ: ನಟ ಸೋನು ಸೂದ್​​ ಯಾವುದೇ ವಿಷಯದಲ್ಲಾದರೂ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವುದರಲ್ಲಿ ಹೆಸರುವಾಸಿಯಾಗಿದ್ದಾರೆ. ಅವರ ಸಾಮಾಜಿಕ ಕಾರ್ಯಗಳಿಂದಾಗಿ ಎಲ್ಲರ ಪ್ರಶಂಸೆಯನ್ನು ಪಡೆಯುತ್ತಿರುತ್ತಾರೆ. ಕರೊನಾ ಸಮಯದಲ್ಲಿ ಲಕ್ಷಾಂತರ ಜನರಿಗೆ ಸಹಾಯ ಮಾಡಿದ್ದರು. ಸದ್ಯ ಸೋನು ಸೂದ್​​​​ ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿನ ಗಂಭೀರ ಪರಿಸ್ಥಿತಿ ಅರಿತು ಅಭಿಮಾನಿಗಳಲ್ಲಿ ಮನವಿಯನ್ನು ಮಾಡಿದ್ದಾರೆ.

ಬಾಂಗ್ಲಾದೇಶದಲ್ಲಿನ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಹಿಂದುಗಳ ಮೇಲೆ ಹಲ್ಲೆ ನಡೆಯುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ. ಇನ್ನೂ ಈ ಕುರಿತು ನಟ ಸೋನು ಸೂದ್​ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ಮಹಿಳೆಯೊಬ್ಬರು ಬಾಂಗ್ಲಾದೇಶದಲ್ಲಿರುವ ಹಿಂದು ಮಹಿಳೆಯೊಬ್ಬರು ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ತನ್ನ ಜೀವವನ್ನು ಉಳಿಸಿಕೊಳ್ಳಲು ಭಾರತಕ್ಕೆ ಹೋಗಬೇಕೆಂದು ಹೇಳಿದ್ದಾರೆ.

ವಿಡಿಯೋ ಹಂಚಿಕೊಂಡಿರುವ ಸೋನು ಸೂದ್​​, ಬಾಂಗ್ಲಾದೇಶದಿಂದ ನಮ್ಮ ಎಲ್ಲ ಸಹ ಭಾರತೀಯರನ್ನು ಮರಳಿ ಕರೆತರಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಬೇಕು, ಇದರಿಂದ ಅವರು ಇಲ್ಲಿ ಉತ್ತಮ ಜೀವನವನ್ನು ಪಡೆಯಬಹುದು. ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವುದು ನಮ್ಮ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ದೇಶವಾಸಿಗಳಲ್ಲಿ ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ ಆಗಸ್ಟ್ 5ರಂದು ನಟಿ ಸೋನಂ ಕಪೂರ್ ಬಾಂಗ್ಲಾದೇಶದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ನಟಿಯ ಬಾಂಗ್ಲಾದೇಶದ ಪರಿಸ್ಥಿತಿ ಭೀಕರವಾಗಿದೆ. ನಾವೆಲ್ಲರೂ ಅಲ್ಲಿರುವವರಿಗಾಗಿ ಪ್ರಾರ್ಥಿಸೋಣ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದ ಪೋಸ್ಟ್​ನಲ್ಲಿ ಬರೆದಿದ್ದರು.

ಸೋನು ಸೂದ್​​​​ ಅವರು ಮುಂದಿನ ಸಿನಿಮಾ ಫತೇಹ್​ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸೋನು ಸೂದ್​ಗೆ ಜೋಡಿಯಾಗಿ ಜಾಕ್ವೆಲಿನ್ ಫರ್ನಾಂಡಿಸ್ ರೊಮ್ಯಾನ್ಸ್​​ ಮಾಡಲಿದ್ದಾರೆ. ಈ ಸಿನಿಮಾದ ನಿರ್ದೇಶನದ ಮೂಲಕ ಸೋನು ತಮ್ಮ ಹೊಸ ಪ್ರಯಾಣವನ್ನು ಆರಂಭಿಸಿದ್ದಾರೆ.(ಏಜೆನ್ಸೀಸ್​​)