ನ್ಯೂಸ್

ಮಕ್ಕಳ ಭವಿಷ್ಯಕ್ಕಾಗಿ ಕಾಂಗ್ರೆಸ್​-ಸಮಾಜವಾದಿ ಪಕ್ಷದ ನಾಯಕರ ಸ್ಪರ್ಧೆ: ಪ್ರಧಾನಿ ಮೋದಿ

ಇಟಾವಾ: ಮೋದಿ ಮತ್ತು ಯೋಗಿಗೆ ಮಕ್ಕಳಿಲ್ಲ. ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ಮಕ್ಕಳ ಭವಿಷ್ಯಕ್ಕಾಗಿ, ಮತ ಬ್ಯಾಂಕ್‌ಗಳಿಗೆ ಲಾಭ ಮಾಡಿಕೊಡುವುದಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಎಸ್‌ಪಿ ಮತ್ತು ಕಾಂಗ್ರೆಸ್ ಪಕ್ಷಗಳ ಘೋಷಣೆಗಳು “ಸುಳ್ಳಾಗಿದ್ದು ಅವುಗಳ ಉದ್ದೇಶವೂ ಸರಿಯಿಲ್ಲ ಎಂದು ಆರೋಪ ಮಾಡಿದರು.

ಸಮಾಜವಾದಿ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ. ತಮ್ಮ ಕುಟುಂಬ ಮತ್ತು ಅವರ ಮತ ಬ್ಯಾಂಕ್‌ಗಳಿಗೆ ಅನುಕೂಲವಾಗುವಂತೆ ಕೆಲಸ ಮಾಡುತ್ತಾರೆ ಎಂದು ಮೋದಿ ಆರೋಪಿಸಿದರು.

‘ಕೋವಿಡ್-19 ಲಸಿಕೆಗಳ ವಿಷಯದ ಬಗ್ಗೆ ಸಮಾಜವಾದಿ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಲಸಿಕೆಗಳ ಬಗ್ಗೆ ತಪ್ಪು ಮಾಹಿತಿ ಬೀಡಿ ಸಮಾಜವಾದಿ ಪಕ್ಷದ ಮುಖಂಡರು ಜನರನ್ನು ಪ್ರಚೋದಿಸಿದ್ದಾರೆ. ಆದರೆ ಅವರು ಮಾತ್ರ ರಹಸ್ಯವಾಗಿ ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದರು.