ಫ್ರೆಂಡ್ಸ್ ಸೆಂಟರ್ ನೇತ್ರ ಭಂಡಾರದ ಬಳಿ ನಾಗರಿಕರಿಗೆ ಆಗುತ್ತಿರುವ ಸಮಸ್ಯೆ ಸರಿಪಡಿಸುವಂತೆ ಬಿ.ಜಿ.ಧನರಾಜ್, ಜಿ.ವಿಜಯಕುಮಾರ್, ವಿ.ನಾಗರಾಜ್, ಮಲ್ಲಿಕಾರ್ಜುನ ಕಾನೂರು, ರಮೇಶ್ ಮತ್ತಿತರರು ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.  
ನ್ಯೂಸ್

ಸಮಸ್ಯೆ ಸರಿಪಡಿಸುವಂತೆ ಎಸ್ಪಿಗೆ ಒತ್ತಾಯ

ಅರವಿಂದ ಅಕ್ಲಾಪುರ

ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆ ಮುಖ್ಯ ರಸ್ತೆ ಪಕ್ಕದಲ್ಲಿ ತಿಂಡಿಗಾಡಿಗಳಿಂದ ನಾಗರಿಕರಿಗೆ ಸಮಸ್ಯೆಯಾಗುತ್ತಿದೆ. ಪೊಲೀಸ್ ಇಲಾಖೆಯಿಂದ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪದಾಧಿಕಾರಿಗಳು ಹಾಗೂ ಸ್ಥಳೀಯ ನಾಗರಿಕರು ಬುಧವಾರ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಫ್ರೆಂಡ್ಸ್ ಸೆಂಟರ್ ಸಂಸ್ಥೆಯು 1966ರಿಂದಲೂ ವಿವಿಧ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ. ಗೋಪಾಲಗೌಡ ಬಡಾವಣೆಯ ಮುಖ್ಯರಸ್ತೆಯಲ್ಲಿ ಫ್ರೆಂಡ್ಸ್ ಸೆಂಟರ್ ನೇತ್ರ ಭಂಡಾರವಿದೆ. ತಳ್ಳು ಗಾಡಿಗಳಲ್ಲಿ ತಿಂಡಿ ತಿನಿಸುಗಳನ್ನು ಮಾರಾಟ ಮಾಡಲಾಗುತ್ತಿದೆ. ಉಳಿದ ಆಹಾರ ತ್ಯಾಜ್ಯವನ್ನು ಫ್ರೆಂಡ್ಸ್ ಸೆಂಟರ್ ನೇತ್ರ ಭಂಡಾರದ ಕಟ್ಟಡ ಬಳಿ ಎಸೆಯಲಾಗುತ್ತಿದೆ. ಇದರಿಂದ ಸ್ವಚ್ಛತೆ ಸಮಸ್ಯೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಬಿ.ಜಿ.ಧನರಾಜ್, ನೇತ್ರ ಭಂಡಾರದ ಚೇರ್ಮನ್ ವಿ.ನಾಗರಾಜ್, ಕಾರ್ಯದರ್ಶಿ ಜಿ.ವಿಜಯಕುಮಾರ್, ಖಜಾಂಚಿ ರಮೇಶ್, ನಿಯೋಜಿತ ಅಧ್ಯಕ್ಷ ಮಲ್ಲಿಕಾರ್ಜುನ ಕಾನೂರು, ನಿರ್ದೇಶಕ ಎಂ.ಮೋಹನ್ ಇತರರಿದ್ದರು.