ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದಲ್ಲಿ ಗುರುವಾರ ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ದಾಸೋಹ ನಡೆಯಿತು. 
ನ್ಯೂಸ್

ಚಾಮುಂಡಿ ವರ್ಧಂತಿ ಪ್ರಯುಕ್ತ ವಿಶೇಷ ಪೂಜೆ

ತಿ.ನರಸೀಪುರ: ನಾಡಿನ ಪ್ರಮುಖ ಧಾರ್ಮಿಕ ಕೇಂದ್ರವಾದ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಗುರುವಾರ ಶ್ರೀ ಚಾಮುಂಡೇಶ್ವರಿ ವರ್ಧಂತಿ ಉತ್ಸವ ವೈಭವದಿಂದ ನಡೆಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಬೀಡನಹಳ್ಳಿ ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಗುರುವಾರ ಪೂಜಾ ಕೈಂಕರ್ಯಗಳು ನೆರವೇರಿದವು.

ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಂಡವು. ದೇವಿಗೆ ಅಭ್ಯಂಜನ ಸ್ನಾನ ಮಾಡಿಸಿ, ಬಳಿಕ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಯಿತು.

ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿದಂತೆ ವಿವಿಧ ಪೂಜೆಗಳನ್ನು ಗ್ರಾಮಸ್ಥರ ನೆರವಿನೊಂದಿಗೆ ಅದ್ದೂರಿಯಾಗಿ ಮಾಡಲಾಯಿತು.

ಮನೆ ದೇವರಾದ ತಾಯಿ ಚಾಮುಂಡೇಶ್ವರಿಗೆ ಗ್ರಾಮದ ದೇಗುಲದಲ್ಲಿ ವಿಶೇಷ ಪೂಜೆ ಬಳಿಕ ಪ್ರಸಾದ ವಿನಿಯೋಗ ಮಾಡಲಾಯಿತು. ಅಕ್ಕಪಕ್ಕದ ಗ್ರಾಮಸ್ಥರು ಸೇರಿದಂತೆ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಭಕ್ತರಿಗೆ ವಿವಿಧ ರೀತಿಯ ಅನ್ನಸಂತರ್ಪಣೆ ಮಾಡಲಾಯಿತು.