ಮದ್ದೂರು: ಮಣ್ಣೆತ್ತಿನ ಅಮಾವಾಸ್ಯೆ ಅಂಗವಾಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ-ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಮದ್ದೂರಮ್ಮ, ಶ್ರೀ ಉಗ್ರ ನರಸಿಂಹಸ್ವಾಮಿ, ಶ್ರೀ ಹೊಳೆ ಆಂಜನೇಯಸ್ವಾಮಿ, ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ಹಾಗೂ ತಾಲೂಕಿನ ವೈದ್ಯನಾಥಪುರ ಗ್ರಾಮದ ಶ್ರೀ ವೈದ್ಯನಾಥೇಶ್ವರಸ್ವಾಮಿ, ಚಿಕ್ಕಂಕನಹಳ್ಳಿಯ ಶ್ರೀ ನಂದಿ ಬಸವೇಶ್ವರಸ್ವಾಮಿ ಹಾಗೂ ಆಬಲವಾಡಿಯ ತೋಪಿನ ತಿಮ್ಮಪ್ಪ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಶೇಷ ಪೂಜೆ, ಮಹಾಮಂಗಳಾರತಿ ಮಾಡಿ ಭಕ್ತಾದಿಗಳಿಗೆ ತೀರ್ಥ, ಪ್ರಸಾದ ವಿತರಿಲಾಯಿತು.