ಉಡುಪಿ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಮದ್ದೂರು ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರದೀಪ್‌ಆಚಾರ್ಯ, ಸುರೇಶ್ ಆಚಾರ್ಯ ಇದ್ದರು. 
ನ್ಯೂಸ್

ವಿಶ್ವಪ್ರಸನ್ನ ತೀರ್ಥ ಶ್ರೀಗಳಿಂದ ವಿಶೇಷ ಪೂಜೆ

ಮದ್ದೂರು: ಉಡುಪಿಯ ಪೇಜಾವರದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಆಶೀರ್ವಚನ ನೀಡಿದರು.

ಬೆಂಗಳೂರಿನಿಂದ ಖಾಸಗಿ ಕಾರ್ಯಕ್ರಮಕ್ಕೆ ಹೋಗುವ ಮಾರ್ಗ ಮಧ್ಯೆ ಶ್ರೀ ಹೊಳೆ ಆಂಜನೇಯಸ್ವಾಮಿ ದೇಗುಲಕ್ಕೆ ಭೇಟಿ ನೀಡಿ, ಮುಖ್ಯ ಪ್ರಾಣ ದೇವರಿಗೆ ಮಹಾಮಂಗಳಾರತಿ ಮಾಡಿ ದರ್ಶನ ಪಡೆದರು. ದೇಗುಲದ ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ, ಸಹ ಅರ್ಚಕ ಸುರೇಶ್ ಆಚಾರ್ಯ ಇದ್ದರು.