ನ್ಯೂಸ್

ತಡೆಗೋಡೆಗೆ ಡಿಕ್ಕಿ ಹೊಡೆದ ಬಸ್​; 18 ಮಂದಿಗೆ ಗಂಭೀರ ಗಾಯ!

ಗಾಜಿಯಾಬದ್​: ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 20 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ. ಬಸ್ ಗಾಜಿಯಾಬಾದ್ ಮಾರ್ಗದಲ್ಲಿ ವೇಗವಾಗಿ ಚಲಿಸುತ್ತಿತ್ತು ಎಂದು ಹೇಳಲಾಗಿದೆ. ಚಾಲಕ ಬಸ್​ ಅನ್ನು ದಿಢೀರ್​ ಎಡ ತಿರುವು ತೆಗೆದುಕೊಂಡ ಪರಿಣಾಮ ನಿಯಂತ್ರಣಕ್ಕೆ ಸಿಗದೆ ರಸ್ತೆಯ ಬದಿ ನಿರ್ಮಿಸಲಾಗಿದ್ದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ತಡೆಗೋಡೆ ಮುರಿದು ಬಸ್​ ಹೆದ್ದಾರಿಯಿಂದ ಕೆಳಗಿಳಿದಿದೆ. ಬಸ್​ನಲ್ಲಿ ಕನಿಷ್ಠ 18 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿ ತಿಳಿಸಿದೆ,(ಏಜೆನ್ಸೀಸ್).