ನವದೆಹಲಿ: ಪ್ರಮುಖ ಭದ್ರತಾ ಕಾರ್ಯಾಚರಣೆಯೊಂದರಲ್ಲಿ, ಭಾರತೀಯ ಗುಪ್ತಚರ ಸಂಸ್ಥೆಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಕ್ರಿಯರಾಗಿರುವ ಹರಿಯಾಣದ ಜನಪ್ರಿಯ ಮಹಿಳಾ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರನ್ನು ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧನ ಮಾಡಲಾಗಿದೆ. ಜ್ಯೋತಿ ಮಲ್ಹೋತ್ರಾ ನಡುವಿನ ನಂಟಿನ ಕುರಿತು ಕುರಿತು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಜೊತೆ ಸಂಬಂಧ ಹೊಂದಿರುವ ಡ್ಯಾನಿಶ್ ಎಂದು ಗುರುತಿಸಲಾದ ಪಾಕಿಸ್ತಾನಿ ಹೈಕಮಿಷನ್ ಉದ್ಯೋಗಿಯೊಬ್ಬರು ಜ್ಯೋತಿಯನ್ನು ಹನಿಟ್ರ್ಯಾಪ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ತನಿಖೆಯಲ್ಲಿ ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಮೂರು ತಿಂಗಳ ಮೊದಲು ಜ್ಯೋತಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ಗೆ ಭೇಟಿ ನೀಡಿದ್ದರು ಎಂಬುದಾಗಿ ತಿಳಿದು ಬಂದಿದೆ.
ಹರಿಯಾಣ ಪೊಲೀಸರು ಕೇಂದ್ರ ಸಂಸ್ಥೆಗಳ ಸಮನ್ವಯದೊಂದಿಗೆ ಆಕೆಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಆಕೆಯ ಆದಾಯದ ಮೂಲಗಳನ್ನು ತಿಳಿಯಲು ನಾವು ಆಕೆಯ ಹಣಕಾಸಿನ ವಹಿವಾಟುಗಳು ಮತ್ತು ಪ್ರಯಾಣದ ಮಾಹಿತಿಯನ್ನು ಕಲೆಹಾಕುತ್ತಿದ್ದೇವೆ ಎಂದು ಎಸ್‌ಪಿ ಸಾವನ್ ಹೇಳಿದ್ದಾರೆ.
ಬೇಹುಗಾರಿಕೆ ಆರೋಪದ ಮೇಲೆ ಬಂಧನಕ್ಕೊಳಗಾದ ಎರಡು ದಿನಗಳ ನಂತರ, ಹಿಸಾರ್ ಪೊಲೀಸ್ ವರಿಷ್ಠಾಧಿಕಾರಿ ಶಶಾಂಕ್ ಕುಮಾರ್ ಸಾವನ್ ಮಾತನಾಡಿದ್ದು, ಯೂಟ್ಯೂಬರ್ ಪಹಲ್ಗಾಮ್ ಭಯೋತ್ಪಾದಕ ದಾಳಿಗೂ ಮುನ್ನ ಸೇರಿದಂತೆ ಹಲವಾರು ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಲ್ಲದೆ, ಚೀನಾಕ್ಕೂ ಪ್ರಯಾಣ ಬೆಳೆಸಿದ್ದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
(ಏಜೆನ್ಸೀಸ್)
ಸಂವಹನವನ್ನು ನಿರ್ವಹಿಸಲು ಅವರು ವಾಟ್ಸಾಪ್, ಟೆಲಿಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಎನ್‌ಕ್ರಿಪ್ಟ್ ಮಾಡಿದ ಸಂದೇಶ ವೇದಿಕೆಗಳನ್ನು ಬಳಸಿದ್ದಾರೆ ಮತ್ತು ಪತ್ತೆಹಚ್ಚುವುದನ್ನು ತಪ್ಪಿಸಲು ತಮ್ಮ ಫೋನ್‌ನಲ್ಲಿ ನಕಲಿ ಹೆಸರಿನಲ್ಲಿ ಐಎಸ್‌ಐ ಸಂಪರ್ಕಗಳನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಸ್ತುತ ಅಧಿಕಾರಿಗಳು ಇನ್ನಷ್ಟು ಮಾಹಿತಿ ಬಗ್ಗೆ ಪರಿಶೀಲಿಸುತ್ತಿದ್ದಾರೆ.