ನ್ಯೂಸ್

ಶ್ರೀಲಂಕಾ ಪ್ರಧಾನಿ ರನಿಲ್​ ವಿಕ್ರಮ ಸಿಂಘೆ ರಾಜೀನಾಮೆ

ಕೊಲಂಬೋ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ನಡುವೆ ಅಧ್ಯಕ್ಷ ಗೋತಬಯ ರಾಜಪಕ್ಸೆ ವಿರುದ್ಧದ ಪ್ರತಿಭಟನೆ ಬೆನ್ನಲ್ಲೇ ಪ್ರಧಾನಿ ರನಿಲ್​ ವಿಕ್ರಮಸಿಂಘೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪ್ರತಿಭಟನೆ ಕಾವು ತೀವ್ರಗೊಂಡಿದ್ದು, ರಾಜಕೀಯ ಅಸ್ಥಿರತೆ ಉಂಟಾಗಿರುವ ಹಿನ್ನಲೆಯಲ್ಲಿ ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ತಾವು ರಾಜೀನಾಮೆ ನೀಡುತ್ತಿರುವುದಾಗಿ ವಿಕ್ರಮ ಸಿಂಘೆ ತಿಳಿಸಿದ್ದಾರೆ.

ಇದಕ್ಕೂ ಮುನ್ನ ರಾಜೀನಾಮೆ ನೀಡಿ ಸರ್ವಪಕ್ಷ ಸರ್ಕಾರ ರಚನೆ ಮಾಡಲು ಸಿದ್ಧ ಎಂದು ಹೇಳಿಕೆ ನೀಡಿದ್ದರು. ರಾಷ್ಟ್ರಪತಿ ಭವನಕ್ಕೆ ಪ್ರತಿಭಟನಾಕಾರರ ಮುತ್ತಿಗೆ ಹಾಕಿದ ಬೆನ್ನಲ್ಲೇ ಸರ್ವಪಕ್ಷ ಸಭೆ ಕರೆದಿದ್ದ ವಿಕ್ರಮಸಿಂಘೆ, ತುರ್ತು ಅಧಿವೇಶನ ಕರೆಯಲು ಸ್ಪೀಕರ್​ಗೆ ಮನವಿ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. (ಏಜೆನ್ಸೀಸ್​)