ನ್ಯೂಸ್

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆ ದಿನಾಂಕ ಪ್ರಕಟ

Mandara

ಬೆಂಗಳೂರು: ಕರೊನಾ ಲಾಕ್​ಡೌನ್​ ಆರಂಭವಾದಾಗಿನಿಂದ ಮುಚ್ಚಿದ್ದ ಶಾಲೆಗಳು ಜನವರಿ 1ರಿಂದ ಮತ್ತೆ ಬಾಗಿಲು ತೆರೆದಿದ್ದು, ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯು ಮಕ್ಕಳು ಇದೀಗ ಶಾಲೆಗೆ ತೆರಳಲು ಆರಂಭಿಸಿದ್ದಾರೆ. ಶಾಲೆ ತೆರೆದು ಒಂದು ವಾರದೊಳಗೇ ಪರೀಕ್ಷೆಯನ್ನೂ ನಿಗದಿ ಮಾಡಲಾಗಿದೆ.

ರಾಜ್ಯದಲ್ಲಿ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದೆ. ಹಾಗೆಯೇ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಅವರು ಟ್ವಿಟ್ಟರ್​ನಲ್ಲಿ ತಿಳಿಸಿದ್ದಾರೆ.

ದ್ವಿತೀಯ ಪಿಯು ಮತ್ತು 10ನೇ ತರಗತಿಗಳ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಲಾಗಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ, ಆದರೆ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.