ನ್ಯೂಸ್

ಮೇ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ -1ರ ಫಲಿತಾಂಶ

ಬೆಂಗಳೂರು: ಮೇ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1ರ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಯಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸುಳಿವು ನೀಡಿದರು.

ಸಮಗ್ರ ಶಿಕ್ಷಣ ಕರ್ನಾಟಕದಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನ ಆರಂಭವಾಗಿದ್ದು ಮೇ ಮೊದಲ ವಾರ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದರು.

ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 8.93 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡು ಪರೀಕ್ಷೆ ಬರೆದಿದ್ದರು.