ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ವೇಳಾಪಟ್ಟಿ ಶನಿವಾರ (ಮೇ 18) ಬಿಡುಗಡೆಗೊಂಡಿದ್ದು, ಜೂನ್ 14ರಿಂದ ಎಕ್ಸಾಂ ಆರಂಭವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ–2 ಜೂನ್ 7ರಿಂದ 14ರವರೆಗೆ ನಡೆಸಲು ಮಂಡಲಿ ತೀರ್ಮಾನಿಸಿತ್ತು. ಇದನ್ನು ಮುಂದೂಡಿ ಜೂನ್ 14ರಿಂದ ಜೂನ್ 22ರವರೆಗೆ ನಡೆಸಲು ತೀರ್ಮಾನಿಸಿ, ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯ www.kseab.karnataka.gov.in ಜಾಲತಾಣ ಪ್ರಕಟಿಸಲಾಗಿದೆ ಎಂದು ತಿಳಿಸಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ವೇಳಾಪಟ್ಟಿ ಹೀಗಿದೆ
- ಜೂನ್ 14: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
- ಜೂನ್ 15: ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ಸಂಸ್ಕೃತ, ಕೊಂಕಣಿ, ಉರ್ದು, ತುಳು, ಮತ್ತು NSQF ವಿಷಯಗಳು
- ಜೂನ್ 18: ಗಣಿತ/ಸಮಾಜ ಶಾಸ್ತ್ರ
- ಜೂನ್ 19: ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್ IV, ಇಂಜಿನಿಯರಿಂಗ್ ಗ್ರಾಫಿಕ್ಸ್2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ‘ಸಿ’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
- ಜೂನ್ 20: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
- ಜೂನ್ 21: ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
- ಜೂನ್ 22: ಸಮಾಜ ವಿಜ್ಞಾನ