ನ್ಯೂಸ್

ಎಸ್ಸೆಸ್ಸೆಲ್ಸಿ ಪರೀಕ್ಷೆ ಬೇಕಾಬಿಟ್ಟಿ ಮೌಲ್ಯಮಾಪಕರ ಆರೋಪ: ವಿದ್ಯಾರ್ಥಿಗಳು, ಪಾಲಕರ ಆಕ್ರೋಶ

ಬೆಂಗಳೂರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನವನ್ನು ಬೇಕಾಬಿಟ್ಟಿಯಾಗಿ ಮಾಡಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು, ಪಾಲಕರು ಮತ್ತು ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೌಲ್ಯಮಾಪಕರ ನಿರ್ಲಕ್ಯದಿಂದ ಹಲವು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ, ಶಾಲೆಗಳಿಂದ ವಂಚಿತರಾಗುವ ಪ್ರಮೇಯ ಸೃಷ್ಟಿಯಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಆತಂಕ ಮತ್ತು ಒತ್ತಡದಲ್ಲಿದ್ದಾರೆ. ಇದಕ್ಕೆ ಹೊಣೆ ಯಾರು? ಮರು ಮೌಲ್ಯಮಾಪನಕ್ಕೆ ಹೆಚ್ಚಿನ ಹಣ ನಿಗದಿ ಮಾಡಿ ಆರ್ಥಿಕವಾತಿ ಹೊರೆ ಮಾಡಲಾಗಿದೆ ಎಂದು ಶನಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು,

ಕೇಂದ್ರ ಪಠ್ಯಕ್ರಮ ಮಂಡಳಿಗಳು ಒಂದೇ ಪರೀಕ್ಷೆ ನಡೆಸಿ ಲಿತಾಂಶ ನೀಡುತ್ತಿವೆ. ರಾಜ್ಯ ಪಠ್ಯಕ್ರಮದಲ್ಲಿ ಮೂರು ಪರೀಕ್ಷೆ ನಡೆಸಿ ಗೋಳು ಹೊಯ್ದುಕೊಳ್ಳುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.