ನ್ಯೂಸ್

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ ನಾಳೆ?

arunakunigal

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ನಾಳೆ(ಆ.7) ಪ್ರಕಟವಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣ ಸಚಿವ ಸುರೇಶ್​ ಕುಮಾರ್​, ನಾಳೆಯೇ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕರೊನಾ ಆತಂಕದ ನಡುವೆಯೂ 2019-20ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆಯನ್ನು ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಬರೆದಿದ್ದು, ಫಲಿತಾಂಶಕ್ಕಾಗಿ ಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ.

ಆಗಸ್ಟ್ ಮೊದಲ ವಾರದಲ್ಲಿ ಎಸ್​ಎಸ್ಎಲ್​ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ಇತ್ತೀಚಿಗೆ ತಿಳಿಸಿದ್ದರು. ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ರಾಜ್ಯದ ಎಲ್ಲ ಕೇಂದ್ರಗಳಲ್ಲೂ ಪೂರ್ಣಗೊಂಡಿದ್ದು, ಶೀಘ್ರವೇ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.