ನ್ಯೂಸ್

ಆ.10ರಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

arunakunigal

ಬೆಂಗಳೂರು: ಕರೊನಾ ಆತಂಕದ ನಡುವೆಯೂ 2019-20ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆ ಬರೆದಿದ್ದ ಸುಮಾರು 8.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಇನ್ನು ಮೂರು ದಿನದಲ್ಲಿ ಹೊರ ಬೀಳಲಿದೆ.

ಆ.10ರಂದು ಎಸ್​ಎಸ್​ಎಲ್​ಸಿ ಫಲಿತಾಂಶ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಶುಕ್ರವಾರ ತಿಳಿಸಿದ್ದಾರೆ.

ಆ.8ರಂದು ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿ ನಿನ್ನೆ(ಗುರುವಾರ) ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಸಚಿವ ಸುರೇಶ್​ ಕುಮಾರ್​, ಫಲಿತಾಂಶ ಪ್ರಕಟ ಯಾವಗ ಎಂಬುದು ಇನ್ನೂ ನಿಶ್ಚಯವಾಗಿಲ್ಲ ಎಂದಿದ್ದರು. ಇದೀಗ ಎಲ್ಲ ಗೊಂದಲಗಳಿಗೂ ತೆರೆ ಬಿದ್ದಿದ್ದು, ವಿದ್ಯಾರ್ಥಿ ಜೀವನ ಪ್ರಮುಖ ಘಟ್ಟ ಎನಿಸಿಕೊಂಡಿರುವ ಎಸ್​ಎಸ್ಎಲ್​ಸಿ ಫಲಿತಾಂಶ ಮುಂದಿನ ಸೋಮವಾರ(ಆ.10) ಪ್ರಕಟವಾಗಲಿದೆ.