ನ್ಯೂಸ್

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ವೆಬ್‌ಸೈಟ್‌ನಲ್ಲಿ ಫಲಿತಾಂಶ ನಾಳೆ ಲಭ್ಯ

Webdesk - Ravikanth

ಬೆಂಗಳೂರು: 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಈ ಸಲ ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಉತ್ತೀರ್ಣತೆ ಪ್ರಮಾಣ ಶೇ. 39.59 ಇದೆ ಎಂದು ಸಚಿವರು ಮಾಹಿತಿ ನೀಡಿದರು.

ಫಲಿತಾಂಶವು ನಾಳೆ ಮಧ್ಯಾಹ್ನ 12 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶವನ್ನು ಕಳುಹಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಫಲಿತಾಂಶ ಲಭ್ಯ ಇರುವ ವೆಬ್​ಸೈಟ್​ಗಳು