ನ್ಯೂಸ್

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ರಮೇಶ್​ ಕುಮಾರ್​​ ಬಿ ಎಡಮೋಳೆ

ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2020ರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಸೆ.21ರಿಂದ 29ರವರೆಗೆ ನಡೆಸಲಿದ್ದು, ವೇಳಾಪಟ್ಟಿ ಬಿಡುಗಡೆ ಮಾಡಿದೆ. ಕರೊನಾ ಹಾಗೂ ಆರೋಗ್ಯ ಸಮಸ್ಯೆಯಿಂದ ಮುಖ್ಯ ಪರೀಕ್ಷೆ ಬರೆಯದೆ ಇರುವ ಅಭ್ಯರ್ಥಿಗಳನ್ನು ಪೂರಕ ಪರೀಕ್ಷೆಯಲ್ಲಿ ಮೊದಲ ಅವಕಾಶ ಎಂದೇ ಪರಿಗಣಿಸಲಾಗುತ್ತದೆ.

ಇಂತಹ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ. ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿದ್ದಾರೆ. ಎಲ್ಲ ಪರೀಕ್ಷೆಗಳು ನಿತ್ಯ ಬೆಳಗ್ಗೆ 10.30ರಿಂದಲೇ ಆರಂಭವಾಗಲಿದೆ. ಈ ಹಿಂದೆ ಮುಖ್ಯ ಪರೀಕ್ಷೆಯಲ್ಲಿ ಯಾವ ರೀತಿಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆಯೋ ಅದೇ ರೀತಿಯ ಸುಕ್ಷತಾ ಕ್ರಮಗಳನ್ನು ಪೂರಕ ಪರೀಕ್ಷೆಯಲ್ಲೂ ತೆಗೆದುಕೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

  • ಸೆ.21: ಗಣಿತ, ಸಮಾಜಶಾಸ್ತ್ರ
  • ಸೆ.22: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)
  • ಸೆ.23: ಸಮಾಜಶಾಸ್ತ್ರ
  • ಸೆ.24: ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
  • ಸೆ.25: ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು), ಎನ್​ಎಫ್​ಕ್ಯೂಅಫ್ ಪರೀಕ್ಷೆಗಳು.
  • ಸೆ.26: ಎಲಿಮೆಂಟ್ಸ್ ಆಫ್ ಮೆಕಾನಿಕಲ್, ಎಲಿಮೆಂಟ್ಸ್ ಆಫ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್, ಗ್ರಾಫಿಕ್ಸ್, ಅರ್ಥಶಾಸ್ತ್ರ
  • ಸೆ.28: ಬೆಳಗ್ಗೆ -ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ
  • ಸೆ.29: ಜೆಟಿಎಸ್ ಪ್ರಾಯೋಗಿಕ ಪರೀಕ್ಷೆ.