ಪಟ್ನಾ:ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಈಗಾಗಲೇ ಧಾರ್ಮಿಕ ವಿಧಿವಿಧಾನಗಳು ಅರಂಭಗೊಂಡಿವೆ. ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಆದರೆಮ ವಿಪಕ್ಷಗಳ ನಾಯಕರು ರಾಮಮಂದಿರದ ಉದ್ಘಾಟನೆಯನ್ನೆ ನೆಪವಾಗಿಟ್ಟುಕೊಂಡು ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಟ್ರೋಲ್ ಆಗುತ್ತಿವೆ.
ಇದೀಗ ಅದೇ ರೀತಿಯ ಘಟನೆಯೊಂದು ಬಿಹಾರದಲ್ಲಿ ನಡೆದಿದ್ದು, ಸ್ವಾತಂತ್ರ್ಯ ಹೋರಾಟಗಾರ ಅಬ್ದುಲ್ಲಾ ಅನ್ಸಾರಿ ಅವರ 51 ನೇ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಇದರ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಸ್ವಾತಂತ್ರ್ಯ ಹೋರಾಟಗಾರ ಅಬ್ದುಲ್ಲಾ ಅನ್ಸಾರಿ ಅವರ 51 ನೇ ಪುಣ್ಯಸ್ಮರಣೆ ಅಂಗವಾಗಿ ಬಿಹಾರದ ಗಯಾ ಜಿಲ್ಲೆಯ ದಿಹುರಿ ಗ್ರಾಮದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಆರ್ಜೆಡಿ ಪಕ್ಷದ ಮಾಜಿ ಸಂಸದ ಅಲಿ ಅನ್ವರ್ ಅನ್ಸಾರಿ ಸೇರಿದಂತೆ ಅನೇಕ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಸ್ಥಳೀಯ ಮುಖಂಡರೊಬ್ಬರು, ಜನವರಿ 22 ರಂದು ನಡೆಯುವ ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠ ಕಾರ್ಯಕ್ರಮವನ್ನು ಟೀಕಿಸಲು ಶುರು ಮಾಡಿದ್ದಾರೆ. ಶ್ರೀ ರಾಮನ ಪ್ರಾಣಪ್ರತಿಷ್ಠಾಪನೆ ಕೇವಲ ಮುಂದಿನ ಚುನಾವಣೆಯಲ್ಲಿ ಮತ ಸೆಳೆಯಲು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ರಾಮಮಂದಿರ ಉದ್ಘಾಟನೆಯನ್ನು ಟೀಕಿಸಲು ಶುರು ಮಾಡುತ್ತಿದ್ದಂತೆ ಹಠಾತನೆ ವೇದಿಕೆ ಕುಸಿದು ಬಿದ್ದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ನಿಮಗೆ ಆಗಬೇಕಾಗಿದ್ದೆ ಎಂದು ಹಲವರು ಕಮೆಂಟ್ ಮಾಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡರೊಬ್ಬರು, ಶ್ರೀರಾಮನ ಹೆಸರು ರಾಜಕೀಯ ಲಾಭಕ್ಕಾಗಿ ಅಲ್ಲ. ಹಿಂದೂ ಸನಾತನ ಧರ್ಮ ದೇಶದ ಹೆಮ್ಮೆ. ಮೊಘಲರು ಭಗವಾನ್ ಶ್ರೀರಾಮನ ಜನ್ಮಸ್ಥಳವನ್ನು ಕೆಡವಿ ಕಟ್ಟಡವನ್ನು ನಿರ್ಮಿಸಿದರು. ವರ್ಷಗಳ ಹೋರಾಟದ ನಂತರ, ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಂತೆ ಭವ್ಯವಾದ ಮತ್ತು ದೈವಿಕ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ವೋಟ್ ಬ್ಯಾಂಕ್ ರಾಜಕ್ಕಾರಣಕ್ಕಾಗಿ ರಾಮಮಂದಿರದ ಉದ್ಘಾಟನೆಯನ್ನು ಟೀಕಿಸುವ ಭರದಲ್ಲಿ ಈ ರೀತಿ ಆಗಬೇಕಾಗಿದ್ದೆ ಎಂದು ಟೀಕಿಸಿದ್ದಾರೆ.