ನ್ಯೂಸ್

ಶ್ರೀಕಾಕುಳಂನ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತ: ಮಕ್ಕಳು ಸೇರಿ 9 ಭಕ್ತರ ಸಾವು! | Stampede

ಆಂಧ್ರಪ್ರದೇಶ: ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ಶನಿವಾರ(ನ.1ರಂದು) ಕಾಲ್ತುಳಿತ(Stampede) ಸಂಭವಿಸಿ ಹಲವಾರು ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಏಕಾದಶಿಯ ಸಂದರ್ಭದಲ್ಲಿ ಕಾಶಿಬುಗ್ಗಾದ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಭಕ್ತರ ಬೃಹತ್ ಸಮಾವೇಶದ ಸಂದರ್ಭದಲ್ಲಿ ಈ ಕಾಲ್ತುಳಿತ ಸಂಭವಿಸಿದೆ ಎಂದು ವರದಿ ಆಗಿದೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಈ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಭಕ್ತರ ಸಾವು "ಹೃದಯವಿ ದ್ರಾವಕ" ಎಂದಿದ್ದಾರೆ.

ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತ ಘಟನೆ ಆಘಾತವನ್ನುಂಟು ಮಾಡಿದೆ. ಈ ದುರಂತ ಘಟನೆಯಲ್ಲಿ ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ತ್ವರಿತ ಮತ್ತು ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ನಾಯ್ಡು ಹೇಳಿದರು.