ನ್ಯೂಸ್

ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ!

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿಯನ್ನು ನೇಮಕ ಮಾಡಲಾಗಿದೆ. ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕವಾಗಿದ್ದಾರೆ.

ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಆಗಿದ್ದ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ಮುಂದುವರಿಸಲಾಗಿದೆ.

ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರು ಆದೇಶ ಹೊರಡಿಸಿದ್ದು, ಕರ್ನಾಟಕದ ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕ ಮಾಡಲಾಗಿದೆ.

ಅರುಣ್ ಸಿಂಗ್ ಅವರು ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿದ್ದರು. ಇನ್ನು ರಾಧಮೋಹನ್ ದಾಸ್ ಅವರು ಲೋಕಸಭೆ ಚುನಾವಣೆಯ ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದರು. ಇದೀಗ ಅರುಣ್ ಸಿಂಗ್ ಅವರನ್ನ ಬದಲಿಸಿ ರಾಧಮೋಹನ್ ದಾಸ್ ಅವರನ್ನು ರಾಜ್ಯ ಬಿಜೆಪಿ ಉಸ್ತುವರಿಯನ್ನಾಗಿ ನೇಮಕ ಮಾಡಲಾಗಿದೆ.

ನೆರೆಯ ರಾಜ್ಯ ಕೇರಳಕ್ಕೆ ಪ್ರಭಾರಿಯಾಗಿ ಪ್ರಕಾಶ್​ ಜಾವ್ಡೇಕರ್​ ಹಾಗೂ ಸಹ ಪ್ರಭಾರಿಯಾಗಿ ಅಪರಾಜಿತಾ ಸಾರಂಗಿ ನೇಮಕವಾಗಿದ್ದಾರೆ. ಗೋವಾಕ್ಕೆ ಪ್ರಭಾರಿಯಾಗಿ ಅಶಿಶ್​ ಸೂದ್​ ನೇಮಕವಾಗಿದ್ದಾರೆ. ಕೆಲವೇ ತಿಂಗಳಿನಲ್ಲಿ ಚುನಾವಣೆ ಎದುರಿಸಲಿರುವ ಸಂಸದ ಲಕ್ಷ್ಮೀಕಾಂತ್ ಬಜ್ಪಾಲ್ ನೇಮಕಗೊಂಡಿದ್ದಾರೆ.