ನ್ಯೂಸ್

ಬಿಜೆಪಿಯ ಆತ್ಮವಲೋಕನದಲ್ಲಿ ಹಲವು ಸತ್ಯಗಳು ಹೊರಬಂದಿವೆ, ಇನ್ನೂ ಹಲವು ಹೊರಬಾರದೆ ಒದ್ದಾಡುತ್ತಿವೆ: ಕಾಂಗ್ರೆಸ್

ಮೋಹನ್​ ಶೆಟ್ಟಿ

ಬೆಂಗಳೂರು: ಬಿಜೆಪಿಯ (BJP) ಸೋಲಿನ ಆತ್ಮವಲೋಕನದ ಫೈನಲ್ ರಿಸಲ್ಟ್ ಬರಲೇ ಇಲ್ಲ! ಒಬ್ಬೊಬ್ಬರದ್ದೂ ಒಂದೊಂದು ಅವಲೋಕನ ಎಂದು ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ (State Congress) ಟ್ವೀಟ್ ಮಾಡಿ ಟೀಕಿಸಿದೆ.

  • ಅಧ್ಯಕ್ಷರಿಂದ ಸೋಲಾಯ್ತು
  • ವಲಸಿಗರಿಂದ ಸೋಲಾಯ್ತು
  • ಅಡ್ಜಸ್ಟ್ಮೆಂಟ್ ನಿಂದ ಸೋಲಾಯ್ತು
  • ಬಡವರ ಅಕ್ಕಿ ಕಿತ್ತುಕೊಂಡು ಸೋಲಾಯ್ತು
  • ಮೋದಿ ಬೀದಿ ಸುತ್ತಿದ್ದಕ್ಕೆ ಸೋಲಾಯ್ತು
  • ಗುಜರಾತ್ ಮಾಡೆಲ್ ನಿಂದ ಸೋಲಾಯ್ತು
  • ಪಕ್ಷದ್ರೋಹಿಗಳಿಂದ ಸೋಲಾಯ್ತು

"ಅಕಸ್ಮಾತ್ ಗೆಲುವಾಗಿದ್ದಿದ್ದರೆ ಕ್ರೆಡಿಟ್ ಸಿಂಪಲ್ ಆಗಿರುತ್ತಿದ್ದವು, ಮೋದಿಯಿಂದ ಗೆಲುವಾಯ್ತು, ಜೋಶಿ, ಸಂತೋಷರಿಂದ ಗೆಲುವಾಯ್ತು. ಅಂತೂ ಇಂತೂ ಬಿಜೆಪಿಯ ಆತ್ಮವಲೋಕನದಲ್ಲಿ ಹಲವು ಸತ್ಯಗಳು ಹೊರಬಂದಿವೆ, ಇನ್ನೂ ಹಲವು ಹೊರಬಾರದೆ ಒದ್ದಾಡುತ್ತಿವೆ" ಎಂದು ಟ್ವೀಟ್ ಮಾಡಿ ಟೀಕಿಸಿದೆ.