ಬೆಂಗಳೂರು: ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಏನೆಲ್ಲ ಅಂಶಗಳು ಸೇರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮುಂದೆ ಬೇಡಿಕೆಗಳ ದೊಡ್ಡ ಪಟ್ಟಿಯನ್ನೇ ಇಟ್ಟಿದ್ದಾರೆ.
ಕೇಂದ್ರ ಸರ್ಕಾರದಿಂದ ನೆರವು ನೀಡುವ ವಿವಿಧ ಯೋಜನೆಗಳಲ್ಲಿ ಮೊದಲು ರಾಜ್ಯ ಸರ್ಕಾರ ಭರಿಸಿ ನಂತರ ಕೇಂದ್ರದಿಂದ ಪಡೆದುಕೊಳ್ಳುವ ನಿಯಮ ಇದ್ದು, ಇದನ್ನು ಬದಲಿಸಿ ಮೊದಲು ಮುಂಗಡ ಪಾವತಿಸುವಂತಾಗಬೇಕು, ಆಶಾ, ಅಂಗನವಾಡಿ ಕಾರ್ಯಕರ್ತೆಯರ ವೇತನ ಪಾಲನ್ನು ಹೆಚ್ಚಿಸಬೇಕು, ಸಾಮಾಜಿಕ ಪಿಂಚಣಿ ಮೊತ್ತ ಹೆಚ್ಚಿಸಬೇಕೆಂದು ಕೋರಿದ್ದಾರೆ.
ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕೇಂದ್ರ ತನ್ನ ಪಾಲನ್ನು ಹೆಚ್ಚಿಸಬೇಕು, ಬೆಂಬಲ ಬೆಲೆ ಯೋಜನೆಯ ಬಾಕಿಯನ್ನು ತಕ್ಷಣ ಬಿಡುಗಡೆ ಮಾಡಬೇಕು, 15ನೇ ಹಣಕಾಸು ಆಯೋಗದ ಶಿಾರಸಿನಂತೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಬೇಕು, ಕೇಂದ್ರ ಸಂಗ್ರಹಿಸುವ ಸೆಸ್ ಮತ್ತು ಸರ್‌ಚಾರ್ಜಅನ್ನು ರಾಜ್ಯಕ್ಕೂ ಹಂಚಿಕೆ ಮಾಡಬೇಕು, ನಗರ ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದ್ದು, ಅನುದಾನಕ್ಕೆ ಕೋರಲಾಗಿದೆ.
ವಸತಿ ಯೋಜನೆಗಳಲ್ಲಿ ಕೇಂದ್ರ ಸರ್ಕಾರದ ಪಾಲು 1.50 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಬೇಕು, ಎಸ್ಕಾಂಗಳಿಗೆ ಆರ್ಥಿಕ ಬೆಂಬಲ ನೀಡಬೇಕು, ರಾಜ್ಯದ ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ವಿಶೇಷ ಅನುದಾನ ಕೊಡಬೇಕು, ಪಶ್ಚಿಮ ಘಟ್ಟದ ಸಂರಕ್ಷಣೆಗೆ 10 ಸಾವಿರ ಕೋಟಿ ರೂ. ನೀಡಬೇಕು, ಭದ್ರಾ ಮೇಲ್ದಂಡೆ ಯೋಜನೆಗೆ ಐದು ಸಾವಿರ ಕೋಟಿ ಕೊಡುವುದಾಗಿ ೋಷಿಸಿದ್ದರೂ ಹಣ ಬಿಡುಗಡೆ ಮಾಡಿಲ್ಲ, ಈಗಲಾದರೂ ಬಿಡುಗಡೆ ಮಾಡಬೇಕು, ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಬೇಕು, ಮೇಕೆದಾಟು, ಕಳಸಾಬಂಡೂರಿ ಯೋಜನೆಗೆ ಅನುಮತಿ ಕೊಡಬೇಕು, ರಸ್ತೆ ಹಾಗೂ ರೈಲ್ವೆ ಯೋಜನೆಗಳಲ್ಲಿ ಭೂ ಸ್ವಾಧೀನದಲ್ಲಿ ಶೇ.50ರಷ್ಟು ವೆಚ್ಚವನ್ನು ಕೇಂದ್ರ ಭರಿಸಬೇಕು, ಅತಿವೃಷ್ಟಿ ಪರಿಹಾರವನ್ನು ಸರಿಯಾದ ಸಮಯಕ್ಕೆ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ.