ಹುಬ್ಬಳ್ಳಿ: ಗೀತಾ ಜಯಂತಿ ನಿಮಿತ್ತ ಶ್ರೀ ಭಗವದ್ಗೀತಾ ಅಭಿಯಾನ, ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನದಿಂದ ಡಿಸೆಂಬರ್ 19ರಂದು ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆಗಳನ್ನು (ಆನ್ಲೈನ್) ಏರ್ಪಡಿಸಲಾಗಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ತಿಳಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಶ್ರೀಗಳು, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜ್ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದು. ಆದರೆ ಇವರೆಲ್ಲ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಿರಬೇಕು. ಈ ಎಲ್ಲ ವಿದ್ಯಾರ್ಥಿಗಳು ಭಗವದ್ಗೀತೆಯ ಮೂರನೇ ಅಧ್ಯಾಯದ ಎಲ್ಲ ಶ್ಲೋಕಗಳನ್ನು ಕಂಠಪಾಠ (ಗೀತಾ ಕಂಠಪಾಠ ಸ್ಪರ್ಧೆ) ಮಾಡಿರಬೇಕು. 5 ನಿಮಿಷದೊಳಗೆ ನಿರ್ಣಾಯಕರು ಸೂಚಿಸುವ ಯಾವುದೇ ಶ್ಲೋಕವನ್ನು ಅನುಕ್ರಮವಾಗಿ ಹೇಳಬೇಕು. ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಮತ್ತು ಮಹಾತ್ಮ ಗಾಂಧಿ ಕುರಿತು ಭಾಷಣ ಸ್ಪರ್ಧೆ (5 ನಿಮಿಷ), ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜ್ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಮತ್ತು ತಿಲಕರು ಕುರಿತ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ. ತಾಲೂಕು ಮಟ್ಟದ ಸ್ಪರ್ಧೆ ಡಿ. 4, ಜಿಲ್ಲಾ ಮಟ್ಟದ ಸ್ಪರ್ಧೆ ಡಿ.11ರಂದು ಜರುಗಲಿದೆ. ಮಾಹಿತಿಗೆ (geethaspardhe@gmail.com), ಮೊ.ಸಂ. 94495-68081, 04424611049ಗೆ ಸಂಪರ್ಕಿಸಬಹುದು ಎಂದರು.
ಅಧ್ಯಾತ್ಮ ವಿದ್ಯೆಯ ಆಕರ ಗ್ರಂಥವೇ ಭಗವದ್ಗೀತೆ. ಗೀತೆಯ ಮೂಲಕ ಸಮಾಜದಲ್ಲಿ ಸುಖ-ಶಾಂತಿ ನೆಲೆಸುವಂತೆ ಹಾಗೂ ಪ್ರತಿ ವ್ಯಕ್ತಿಯನ್ನು ಸುಸಂಸ್ಕೃತನನ್ನಾಗಿ ರೂಪಿಸುವ ಉದ್ದೇಶದಿಂದ ಶ್ರೀ ಭಗವದ್ಗೀತಾ ಅಭಿಯಾನ 2007ರಲ್ಲಿ ಪ್ರಾರಂಭಿಸಲಾಗಿದೆ. | ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ