Karnataka School News Paper
- ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಕಡ್ಡಾಯ
- ಮಕ್ಕಳಿಂದ ಅತಿಯಾಗಿ ಮೊಬೈಲ್ ಬಳಕೆ ಮಾಡುವುದನ್ನು ತಡೆಯಲು ಹೊಸ ಕ್ರಮ
- ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು ಪರಿಗಣಿಸಿರುವ ಸರ್ಕಾರ
ಬೆಂಗಳೂರು: ಕರ್ನಾಟಕದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ನಿತ್ಯವು ಹತ್ತರಿಂದ ಹದಿನೈದು ನಿಮಿಷ ದಿನ ಪತ್ರಿಕೆ ಓದೋದು ಕಡ್ಡಾಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಣೆ ಹೊರಡಿಸಿದೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಡಿಸೆಂಬರ್ನಲ್ಲಿ ಈ ಬಗ್ಗೆ ಶಿಫಾರಸು ಮಾಡಿತ್ತು. ಇದನ್ನು ಪರಿಗಣಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದೆ. ಶೈಕ್ಷಣಿಕ ವರ್ಷ ಆರಂಭವಾದ ನಂತರ ಈ ಆದೇಶವನ್ನು ಪಾಲನೆ ಮಾಡುವಂತೆ ಪ್ರಕಟಣೆಯಲ್ಲಿ ವಿವರಿಸಲಾಗಿದೆ.
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೇಳಿದ್ದೇನು?
ಎಲ್ಲ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಬೆಳಗ್ಗಿನ ಪ್ರಾರ್ಥಾನೆ ನಡೆದ ನಂತರ ಅದೇ ಸಭೆಯಲ್ಲಿ, ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಯನ್ನು ಕಡ್ಡಾಯವಾಗಿ ಓದಬೇಕು. ಈ ಅಭ್ಯಾಸವು ಮಕ್ಕಳು ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ ವ್ಯಸನಿಗಳಾಗೋದನ್ನು ತಡೆಟ್ಟಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ತನ್ನ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.
ಕೋವಿಡ್ ಕಾಲದ ನಂತರ ವಿದ್ಯಾರ್ಥಿಗಳು ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾಗಳಿಗೆ ಅಡಿಕ್ಟ್ ಆಗಿದ್ದಾರೆ. ಇದರಿಂದ ದೃಷ್ಟಿ ದೋಷ, ಸ್ಮರಣ ಶಕ್ತಿ, ಓದಿನಲ್ಲಿ ಕಡಿಮೆ ಆಸಕ್ತಿಯನ್ನು ತೋರಿಸುವುದು, ದೈಹಿಕ ಚಟುವಟಿಕೆಗಳ ಬಗ್ಗೆ ಗಮನಹರಿಸುತ್ತಿಲ್ಲ. ಈ ಕ್ರಮವು ಮಕ್ಕಳ ಮಾನಸಿ ಮತ್ತು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುವಂತೆ ಮಾಡುತ್ತದೆ. ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಸಾವಿರ ಗೊಂದಲಕ್ಕೆ ಈಡಾಗುತ್ತಾರೆ ಎಂದು ಆಯೋಗವು ಇಲಾಖೆಗೆ ಕೊಟ್ಟ ಪತ್ರದಲ್ಲಿ ಉಲ್ಲೇಖಿಸಿತ್ತು.
ಮೊಬೈಲ್ ಬಿಡಿ, ಪತ್ರಿಕೆ ಹಿಡಿ
ಶಾಲೆಗಳಲ್ಲಿ ನಿತ್ಯ 10ರಿಂದ 15 ನಿಮಿಷ ನ್ಯೂಸ್ ಪೇಪರ್ ಓದುವುದರಿಂದ ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳುತ್ತಾರೆ. ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮ ಪರೀಕ್ಷೆಯಲ್ಲಿ ಭಾಗವಹಿಸಲು ಸಹಾಕಾರಿಯಾಗುತ್ತದೆ. ಕನ್ನಡ ಶಬ್ಧಕೋಶ, ಭಾಷೆ ಬರವಣಿಗೆ ಕೌಶಲ್ಯವು ಮಕ್ಕಳಲ್ಲಿ ಬೆಳೆಯುತ್ತದೆ ಎಂದು ಆಯೋಗ ತಿಳಿಸಿದೆ
ಮಕ್ಕಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷ ಶಶಿಧರ್ ಬಿ ಅವರು ಮಾತನಾಡಿ, ಮೊಬೈಲ್ ಬಳಕೆ ಹೆಚ್ಚಾಗಿ ಮಕ್ಕಳಲ್ಲಿ ವಿಜ್ ವಿಜ್ಞಾನ, ತಂತ್ರಜ್ಞಾನ, ಕ್ರೀಡೆಯಂತಹ ಘಟನೆಗಳ ಬಗಗ್ಎ ಮಾಹಿತಿ ತಿಳಿದುಕೊಳ್ಳುತ್ತಾರೆ. ನಾವು ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ಹಂಚಿಕೊಂಡು ಪತ್ರ ಬರೆದಿದ್ದೆವು. ಹೊಸ ನಿರ್ಧಾರದ ಬಗ್ಗೆ ಶಿಕ್ಷಕರಿಗೆ ಆಯಾ ಮಟ್ಟದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮಾಹಿತಿ ನೀಡೋದು ಮುಖ್ಯವಾಗಿದೆ ಎಂದು ಹೇಳಲಾಗಿದೆ, (ಏಜೆನ್ಸೀಸ್).