ಪಿಯು ಪರೀೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ನೆಲಮಂಗಲದ ಶ್ರೀ ಬಸವೇಶ್ವರ ಬಾಲಕಿಯರ ಪಿಯು ಕಾಲೇಜು ಹಾಗೂ ಸ್ವತಂತ್ರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯಿಂದ ಸನ್ಮಾನಿಸಲಾಯಿತು. ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶ್ರೀ ಸಿದ್ದಲಿಂಗಸ್ವಾಮೀಜಿ, ಪ್ರಾಂಶುಪಾಲರು, ಉಪನ್ಯಾಸಕರು ಇದ್ದರು.
ನೆಲಮಂಗಲ : ದ್ವೀತಿಯ ಪಿಯು ಪರೀೆಯಲ್ಲಿ ನಗರದ ಪವಾಡ ಶ್ರೀ ಬಸವಣ್ಣದೇವರ ಮಠದ ಶ್ರೀ ಬಸವೇಶ್ವರ ಬಾಲಕಿಯರ ಪದವಿಪೂರ್ವ ಕಾಲೇಜು ಮತ್ತು ಶ್ರೀ ಬಸವೇಶ್ವರ ಸ್ವತಂತ್ರ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಬಂದಿದೆ.
ಎರಡೂ ಕಾಲೇಜಿನಿಂದ ಒಟ್ಟು 337 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 130 ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದರೆ, 190 ವಿದ್ಯಾರ್ಥಿಗಳು ಪ್ರಥಮ ದರ್ಜೆ, 15 ವಿದ್ಯಾರ್ಥಿಗಳು ದ್ವೀತಿಯ ದರ್ಜೆ, ಇಬ್ಬರು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 20 ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯಿಂದ ಸನ್ಮಾನಿಸಲಾಯಿತು.
ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶ್ರೀ ಸಿದ್ದಲಿಂಗಸ್ವಾಮೀಜಿ, ಶ್ರೀ ಬಸವೇಶ್ವರ ಸ್ವತಂತ್ರ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ದೇವರಾಜು, ಶ್ರೀ ಬಸವೇಶ್ವರ ಬಾಲಕಿಯರ ಪಿಯು ಕಾಲೇಜು ಪ್ರಾಂಶುಪಾಲೆ ಎಚ್.ಎಸ್.ನೀಲಾ, ಉಪನ್ಯಾಸಕರಾದ ಅಕ್ಕಮಹಾದೇವಿ, ಕಲ್ಪನಾ, ಪ್ರದಿಪ್, ಜಯಶ್ರೀ, ರೇಖಾ, ಬಿಂದೂ, ಮಮತಾ, ನವ್ಯಶ್ರೀ, ವಿನಯ್, ಕನಕಾ, ಕೆ.ಸಿ.ಪಲ್ಲವಿ, ನಿಸರ್ಗ, ಎಂ.ಪಲ್ಲವಿ, ಹೇಮಂತ್, ವಸಂತ್ ಇದ್ದರು.