10,000 people participated in the celebration
ತುರುವೇಕೆರೆ : ಇದೇ ತಿಂಗಳ 9ರಂದು ಚಿತ್ರದುರ್ಗದಲ್ಲಿ ಬಿಎಸ್ವೈ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಆಯೋಜಿಸಿರುವ ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ತುರುವೇಕೆರೆ ಕ್ಷೇತ್ರದಿಂದ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಮಾಜಿ ಶಾಸಕ ಮಸಾಲ ಜಯರಾಮ್ ತಿಳಿಸಿದರು.
ಪಟ್ಟಣದ ಸಮೀಪದ ತಮ್ಮ ಪಾಮ್ರ್ ಹೌಸ್ನಲ್ಲಿ ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿರುವ ಕೀರ್ತಿ ಬಿಎಸ್ವೈಗೆ ಸಲ್ಲುತ್ತದೆ. ಕೇವಲ 2 ಸ್ಥಾನಗಳಿಂದ ಸ್ವಂತ ಬಲದಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸುವ ಹಂತಕ್ಕೆ ಬಂದಿರುವುದು ಬಿಎಸ್ವೈ ಶ್ರಮದಿಂದ. ಸೈಕಲ್ನಲ್ಲಿ ರಾಜ್ಯವನ್ನು ಸುತ್ತಿ ಪಕ್ಷ ಸಂಘಟನೆ ಮಾಡಿದ್ದಾರೆ. ಸಾವಿರಾರು ರೈತರ ಪರ ಹೋರಾಟಗಳನ್ನು ಮಾಡಿ ರೈತ ನಾಯಕನಾಗಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಜನಪರವಾದ ಯೋಜನೆ ನೀಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ತಾಲೂಕಿನ ಅಭಿವೃದ್ದಿ ಕಾಮಗಾರಿಗೆ ಸಾವಿರಾರು ಕೋಟಿ ಅನುಧಾನ ನೀಡಿದ್ದಾರೆ. ಬಿಎಸ್ವೈ ಅಭಿಮಾನೋತ್ಸವ ಆಚರಿಸುತ್ತಿರುವುದು ಸಂತೋಷದ ವಿಷಯ. ಈ ಕಾರ್ಯಕ್ರಮಕ್ಕೆ ನಮ್ಮ ಕ್ಷೇತ್ರದಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಹಿರಿಯ ಮುಖಂಡ ಅರಳಿಕೆರೆ ಶಿವಯ್ಯ, ಹಾಲೇಗೌಡ, ತೀರ್ಥಕುಮಾರ್, ಜಗದೀಶ್, ಪದ್ಮಾವತಿ, ರಾಧಾ, ಅನಿತಾ ಮತ್ತಿತರರು ಇದ್ದರು.