ವಾಯುಭಾರ ಕುಸಿತ 
ರಾಜ್ಯ

ರಾಜ್ಯದಲ್ಲಿ 2 ದಿನ ತುಂತುರು ಮಳೆ-Light rain

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮದಿಂದ ರಾಜ್ಯದ ಹಲವೆಡೆ ಶನಿವಾರ ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆಯಾಯಿತು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಾತ್ರಿ ಮತ್ತು ಮುಂಜಾನೆ ಕಾಣಿಸಿಕೊಂಡಿರುವ ಚಳಿ ಮುಂದುವರಿದಿದೆ.ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಂಡ್ಯ, ಮೈಸೂರು ಚಾಮರಾಜನಗರ ಮತ್ತು ಕೊಡಗು ಸೇರಿ ದಕ್ಷಿಣ ಕರ್ನಾಟಕ ವ್ಯಾಪ್ತಿಯ ಪ್ರದೇಶಗಳಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ.
ಉತ್ತರ ಕರ್ನಾಟಕ, ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ.ವಿಜಯಪುರದಲ್ಲಿ 9.5 ಡಿ.ಸೆ. ಉಷ್ಣಾಂಶ ದಾಖಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಧಾರವಾಡದಲ್ಲಿ ಕಾಣಿಸಿಕೊಂಡಿರುವ ಶೀತಗಾಳಿ ಮುಂದಿನ 48 ಗಂಟೆ ಇರಲಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ವಾಡಿಕೆಗಿಂತ 3-4 ಡಿ.ಸೆ.ಉಷ್ಣಾಂಶ ಕುಸಿತವಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ.
ಬೆಂಗಳೂರಿನಲ್ಲಿ ಮುಂದಿನ 4 ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮುಂಜಾನೆ ವೇಳೆ ದಟ್ಟವಾಗಿ ಮಂಜು ಬೀಳಲಿದೆ. ಗರಿಷ್ಠ, ಕನಿಷ್ಠ ತಾಪಮಾನ ಕ್ರಮವಾಗಿ 25 ಮತ್ತು 16 ಡಿ.ಸೆ. ದಾಖಲಾಗಬಹುದು.