ಬೆಂಗಳೂರು: ಗೌರಿ-ಗಣೇಶ ಹಬ್ಬದ ನಿಮಿತ್ತ ನಗರದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನಗರ ಪೊಲೀಸರು ವ್ಯಾಪಕ ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಹೆಚ್ಚುವರಿಯಾಗಿ 3,000 ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಿದ್ದಾರೆ.
ನಗರದ ಎಲ್ಲ ಡಿಸಿಬಿ ವ್ಯಾಪ್ತಿಯಲ್ಲಿ 10 ಸಾವಿರ ಸಿಸಿ ಕ್ಯಾಮರಾಗಳು ಕಾರ್ಯನಿರ್ವಹಿಸುತ್ತಿವೆ. ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ, ಮೆರವಣಿಗೆ ಸಂದರ್ಭದಲ್ಲಿ ಹಾಗೂ ಸೂಕ್ಷ್ಮ ಪ್ರದೇಶದಲ್ಲಿ ಸಿಸಿ ಕ್ಯಾಮರಾ ಕಣ್ಗಾವಲು ಇರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದರು.
ಪ್ರಮುಖವಾಗಿ ಮೂರು ದಿನ, ಐದು ದಿನ ಹಾಗೂ ಏಳುದಿನ ಗಣೇಶ್ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಆರ್‌ಎಎ್, ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಗಣೇಶ್ ಪ್ರತಿಷ್ಠಾಪನೆ, ಮಹಾಮಂಡಳ ಸೇರಿ ಗಣೇಶ್ ಮೂರ್ತಿ ಆಯೋಜಕರು ಸ್ವಯಂ ಸೇವಕಾರಿ ಕೆಲಸ ಮಾಡುತ್ತಿದ್ದಾರೆ. ಗಣೇಶ್ ವಿಸರ್ಜನೆ ವೇಳೆ ಜಿಬಿಎ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಕಡೆ ಕಲ್ಯಾಣಿ, ನೀರಿನ ಟ್ಯಾಂಕ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.
ಡಿಜಿ ಸಂಪೂರ್ಣ ನಿಷೇಧ:
ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನಿಯಮ ಪಾಲನೆ ಹಾಗೂ ಡಿಜಿ ಬಳಕೆಯನ್ನು ಸಂೂರ್ನ ನಿಷೇಧಿಸಲಾಗಿದೆ. ಆದರೆ ನಿಯಮಾನುಸಾರ ನಿಗದಿತ ಡೆಸಿಬಲ್ ಮಿತಿಯೊಳಗೆ ಧ್ವನಿವರ್ಧಕ ಬಳಸಲು ಅವಕಾಶವಿದೆ. ನಿಯಮ ಉಲ್ಲಂಘಿಸಿ ಹೆಚ್ಚಿನ ಶಬ್ದದಲ್ಲಿ ಡಿಜೆ ಬಳಸಿದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂಬ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
ಮೆರವಣಿಗೆ ಮಾರ್ಗಗಳು ಹಾಗೂ ಗಣೇಶ ವಿಸರ್ಜನಾ ಸ್ಥಳಗಳ ಮೇಲೆ ಪೊಲೀಸರು ತೀವ್ರ ನಿಗಾ ವಹಿಸಲಾಗಿದ್ದು, ಡ್ರೋನ್‌ಗಳ ಮೂಲಕ ಆಕಾಶ ಮಾರ್ಗದ ಕಣ್ಗಾವಲು ಇರಿಸಲಾಗಿದೆ. ಗಣೇಶ ಮೂರ್ತಿಯ ವಿಸರ್ಜನೆಯ ಸಮಯದಲ್ಲಿ ಮಾರ್ಗದ ಕುರಿತು ಮೊದಲೇ ಪೊಲೀಸರಿಗೆ ತಿಳಿಸಬೇಕು. ವಿಸರ್ಜನಾ ಸ್ಥಳಗಳಲ್ಲಿ ನುರಿತ ಈಜುಗಾರರು ಮತ್ತು ಲ್ೈ ಜಾಕೆಟ್‌ಗಳ ವ್ಯವಸ್ಥೆ ಮಾಡಲಾಗಿದೆ. ಗಣೇಶ ಪೆಂಡಾಲ್‌ಗಳಲ್ಲಿ ಅಶ್ಲೀಲ ಪ್ರದರ್ಶನಗಳು ಇರಬಾರದು ಮತ್ತು ವಿಸರ್ಜನಾ ಮೆರವಣಿಗೆಗೆ ಯಾರೂ ಮದ್ಯಪಾನ ಮಾಡಿ ಬರಬಾರದು. ಒಂದು ವೇಳೆ ಬಂದು ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ ಆ ವ್ಯಕ್ತಿ ಜತೆ ಆಯೋಜಕರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಇದರೊಂದಿಗೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಮಫ್ತಿ ಪೊಲೀಸರು, ಹೊಯ್ಸಳ ಸಿಬ್ಬಂದಿ ನಿರಂತರವಾಗಿ ಗಸ್ತು ತಿರುಗಲಿದ್ದಾರೆ. ಪೆಂಡಾಲ್‌ಗಳಲ್ಲಿ ಜೋರು ಶಬ್ಧ ಮಾಡುವ ಧ್ವನಿವರ್ಧಕಗಳನ್ನು ಹಾಕಿಕೊಂಡರೆ ಅವರ ವಿರುದ್ಧವೂ ಕ್ರಮಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.