ಮುತಗಾ ಗ್ರಾಮದ ಮರಗಾಯಿ ಮಂದಿರದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಚನ್ನರಾಜ ಹಟ್ಟಿಹೊಳಿ ಚೆಕ್ ಹಸ್ತಾಂತರಿಸಿದರು. ಮೃಣಾಲ ಹೆಬ್ಬಾಳ್ಕರ್ ಇತರರಿದ್ದರು. 
ರಾಜ್ಯ

ಮಂದಿರ ಅಭಿವೃದ್ಧಿಗೆ ಶೀಘ್ರದಲ್ಲೇ 50 ಲಕ್ಷ ರೂ.

ಧರ್ಮರಾಜ ರಾಮನಗೌಡ ಪಾಟೀಲ
ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿನ ದೇವಸ್ಥಾನಗಳ ಸಂರಕ್ಷಣೆ, ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಮುತಗಾ ಗ್ರಾಮದ ಮರಗಾಯಿ ಮಂದಿರದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಮಾತನಾಡಿ, ದೇವಸ್ಥಾನಗಳ ಅಭಿವೃದ್ಧಿ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರ್ಥಿಕ ನೆರವು ನೀಡುವ ಜತೆಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದರು.
ಮಂದಿರದ ಸಮಗ್ರ ಅಭಿವೃದ್ಧಿ ಮತ್ತು ಮೂಲಸೌಕರ್ಯಕ್ಕಾಗಿ ರಾಜ್ಯ ಸರ್ಕಾರದಿಂದ 50 ಲಕ್ಷ ರೂ. ವಿಶೇಷ ಅನುದಾನ ಬಿಡುಗಡೆ ಆಗಲಿದೆ. ಕ್ಷೇತ್ರದ ಪ್ರತಿ ಗ್ರಾಮದಲ್ಲೂ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ದೇವಸ್ಥಾನಗಳ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದರು.
ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ, ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳ್ಕರ್ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳಿಗೆ ಚೆಕ್ ಹಸ್ತಾಂತರಿಸಿದರು.