50 unregistered bikes, 5 autos confiscated
ಚಿಂತಾಮಣಿ : ನಗರದಲ್ಲಿ ಸಂಚಾರ ನಿಯಮ ಉಲ್ಲಂಸುವವರ ವಿರುದ್ಧ ಪೊಲೀಸರು ಮಂಗಳವಾರ ಕಾರ್ಯಾಚರಣೆಗೆ ಇಳಿದಿದ್ದಾರೆ. ಸೂಕ್ತ ದಾಖಲೆಗಳು, ಚಾಲನಾ ಪರವಾನಿಗೆ ಇಲ್ಲದ, ಹೆಲ್ಮೆಟ್ ಧರಿಸದ ಸವಾರರ ಸುಮಾರು 50ಕ್ಕೂ ಹೆಚ್ಚು ಬೈಕ್ಗಳು ಮತ್ತು 5 ಆಟೋ ರಿಾಗಳನ್ನು ವಶಪಡಿಸಿಕೊಂಡು ಠಾಣೆ ಬಳಿ ಕರೆತಂದು ಭಾರಿ ದಂಡ ವಿಧಿಸಿದ್ದಾರೆ.
ನಗರದ ಪ್ರಮುಖ ರಸ್ತೆಗಳಲ್ಲಿ ನಗರಠಾಣೆ ಪೊಲೀಸ್ ಇನ್ಸ್ಪೆಕ್ಟರ್ ವಿಜಿಕುಮಾರ್ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ಗಳಾದ ರಮೇಶ್, ಪ್ರಕಾಶ್ ಹಾಗೂ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಂಜೀವ ಪೂಜಾರ ಒಳಗೊಂಡ ಸಿಬ್ಬಂದಿ ವಾಹನ ತಪಾಸಣೆ ನಡೆಸಿದರು. ಆಟೋ ಮತ್ತು ಬೈಕ್ಗಳನ್ನು ತಡೆದು ಆರ್ಸಿ., ವಿಮೆ ಮತ್ತಿತರ ದಾಖಲೆ ಪರಿಶೀಲಿಸಲಾಯಿತು.
ದಾಖಲೆ ಹಾಗೂ ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ವಶಕ್ಕೆ ಪಡೆದು ಠಾಣೆ ಮುಂದೆ ತಂದು ನಿಲ್ಲಿಸಲಾಗಿತ್ತು. ಮೊದಲ ಬಾರಿಯ ತಪ್ಪು ಎಂಬ ಕಾರಣಕ್ಕೆ ದಂಡ ವಿಧಿಸಿ, ಸವಾರರಿಗೆ ವಾರ್ನಿಂಗ್ ನೀಡಿ ಕಳುಹಿಸಲಾಯಿತು.
ನಗರಠಾಣೆ ಇನ್ಸ್ಪೆಕ್ಟರ್ ವಿಜಿಕುಮಾರ್ ಮಾತನಾಡಿ, ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಿದರೆ ಅವರ ಪಾಲಕರ ವಿರುದ್ಧವೇ ಕ್ರಮ ಕೈಗೊಳ್ಳಲಾಗುವುದು. ಆಟೋ ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು ಮತ್ತು ಎಲ್ಲ ದಾಖಲೆಗಳನ್ನು ಹೊಂದಿರಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಬೇಕು ಎಂದರು.