ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಆರ್‌ಜಿಯುಎಚ್‌ಎಸ್ ಕುಲಪತಿ ಡಾ. ಬಿ.ಸಿ. ಭಗವಾನ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವಾ ಮಾತನಾಡಿದರು. 
ರಾಜ್ಯ

ಜ.12ರಿಂದ 16ರವರೆಗೆ ಮೂಡಬಿದರೆಯಲ್ಲಿ 85ನೇ ಅಂತರ್ ವಿವಿ ಅಥ್ಲೆಟಿಕ್ ಕ್ರೀಡಾಕೂಟ

ಪ್ರಮುಖ ಮುಖ್ಯಾಂಶಗಳು

  • ಆಳ್ವಾಸ್ ಮತ್ತು ಆರ್‌ಜಿಯುಎಚ್‌ಎಸ್ ಸಹಯೋಗದಲ್ಲಿ ನಡೆಯುತ್ತಿರುವ ನಾಲ್ಕನೇ ಕ್ರೀಡಾಕೂಟವಾಗಿದೆ
  • ಕ್ರೀಡಾಕೂಟವು ಮೂಡಬಿದರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದ್ದು, ದೇಶದ 312ಕ್ಕೂ ಅಧಿಕ ವಿಶ್ವವಿದ್ಯಾಲಯಗಳ 4,288ಕ್ಕೂ ಹೆಚ್ಚು ಅಥ್ಲೀಟ್‌ಗಳು ಹಾಗೂ ಸುಮಾರು ಒಂದು ಸಾವಿರ ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ
  • ಜ.12ರಂದು ಸಂಜೆ 4.30ಕ್ಕೆ ವಿಧಾನಸಭಾಧ್ಯಕ್ಷ ಡಾ. ಯು.ಟಿ. ಖಾದರ್ ರೀದ್ ಚಾಲನೆ ನೀಡಿ, ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಲಿದ್ದಾರೆ.
ಬೆಂಗಳೂರು: ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್‌ಜಿಯುಎಚ್‌ಎಸ್) ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ ಜ.12ರಿಂದ 16ರವರೆಗೆ 85ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ.
ಕ್ರೀಡಾಕೂಟವು ಮೂಡಬಿದರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದ್ದು, ದೇಶದ 312ಕ್ಕೂ ಅಧಿಕ ವಿಶ್ವವಿದ್ಯಾಲಯಗಳ 4,288ಕ್ಕೂ ಹೆಚ್ಚು ಅಥ್ಲೀಟ್‌ಗಳು ಹಾಗೂ ಸುಮಾರು ಒಂದು ಸಾವಿರ ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಆರ್‌ಜಿಯುಎಚ್‌ಎಸ್ ಕುಲಪತಿ ಡಾ. ಬಿ.ಸಿ. ಭಗವಾನ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವಾ 
ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆಳ್ವಾಸ್ ಮತ್ತು ಆರ್‌ಜಿಯುಎಚ್‌ಎಸ್ ಸಹಯೋಗದಲ್ಲಿ ನಡೆಯುತ್ತಿರುವ ನಾಲ್ಕನೇ ಕ್ರೀಡಾಕೂಟವಾಗಿದೆ. ಒಟ್ಟು ಐದು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟಕ್ಕೆ ದೇಶದ ಹಲವು ರಾಜ್ಯಗಳಿಂದ ಅಥ್ಲೀಟ್‌ಗಳು ಭಾಗವಹಿಸಲಿದ್ದು, ಅವರಿಗೆಲ್ಲರಿಗೂ ಉಚಿತ ವಸತಿ ಮತ್ತು ಊಟದ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ಜ.12ರಂದು ಸಂಜೆ 4.30ಕ್ಕೆ ವಿಧಾನಸಭಾಧ್ಯಕ್ಷ ಡಾ. ಯು.ಟಿ. ಖಾದರ್ ರೀದ್ ಚಾಲನೆ ನೀಡಿ, ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಲಿದ್ದಾರೆ. ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ಡಾ. ಶರಣ ಪ್ರಕಾಶ್ ಪಾಟೀಲ್ ಭಾಗವಹಿಸಲಿದ್ದಾರೆ. ಜ.13ರಂದು ಬೆಳಗ್ಗೆ 7 ಗಂಟೆಗೆ ನಶಾಮುಕ್ತ ಭಾರತ ವಾಕಥಾನ್ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ಅರ್ಜುನ್ ಒಡೆಯರ್, ಮೌಲ್ಯಮಾಪನ ಕುಲಸಚಿವ ಡಾ. ರಿಯಾಜ್ ಪಾಷಾ ಉಪಸ್ಥಿತರಿದ್ದರು.

ಕ್ರೀಡಾಕೂಟದ ವಿಶೇಷತೆಗಳು:

- ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಎಲ್ಲ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 
- ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳು ಕೂಡ ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ನಡೆಸಲಾಗುತ್ತದೆ.
- ಎರಡು ವಿಭಾಗದಲ್ಲಿ 47 ಸ್ಪರ್ಧೆಗಳು ನಡೆಯಲಿದ್ದು, ಮೊದಲ ಬಹುಮಾನ 15 ಸಾವಿರ ರೂ. ನಗದು, ಎರಡು ಮತ್ತು ಮೂರನೇ ಬಹುಮಾನಗಳಿಗೆ ಕ್ರಮವಾಗಿ 10 ಮತ್ತು 5 ಸಾವಿರ ರೂ. ನಗದು ಬಹುಮಾನ ನೀಡಲಾಗುತ್ತದೆ.
- ಸುಸಜ್ಜಿತ ಸಿಂಥೆಟಿಕ್ ಟ್ರ್ಯಾಕ್‌ನಲ್ಲಿ ಹೊನಲು ಬೆಳಕಿನಲ್ಲಿ ಕ್ರೀಡಾಕೂಟ ನಡೆಯಲಿದೆ. ಅತ್ಯಾಧುನಿಕ ೆಟೋ ಫಿನಿಷಿಂಗ್ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ.