ಬೆಂಗಳೂರು : ಶೆಟ್ಟಿಹಳ್ಳಿಯಲ್ಲಿರುವ ಟಿ.ದಾಸರಹಳ್ಳಿ ಶಾಸಕ ಎಸ್.ಮುನಿರಾಜು ಅವರ ನಿವಾಸದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ದಸರಾ ಬೊಂಬೆಗಳ ಅದ್ದೂರಿ ಪ್ರದರ್ಶನ ಏರ್ಪಡಿಸಲಾಗಿದೆ. ವಿವಿಧ ಬೊಂಬೆಗಳನ್ನು ಪ್ರತಿಷ್ಠಾಪಿಸಿ ಅವುಗಳಿಗೆ ಆಕರ್ಷಕ ಅಲಂಕಾರ ಮಾಡಿ 9 ದಿನಗಳ ಕಾಲ ಪ್ರತಿದಿನ ನವ ದುರ್ಗಾದೇವಿಯರ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಆಚರಣೆ ಮಾಡಲಾಗುತ್ತದೆ.
ಈ ವೇಳೆ ಮಾತನಾಡಿದ ಶಾಸಕ ಮುನಿರಾಜು, ‘ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನವರಾತ್ರಿ ಸಂದರ್ಭದಲ್ಲಿ ನಮ್ಮ ಮನೆಯಲ್ಲಿ ದಸರಾ ಬೊಂಬೆಗಳನ್ನು ಪ್ರತಿಷ್ಠಾಪಿಸಲಾಗಿದ್ದು, ವಿವಿಧ ಪೂಜಾ ವಿಧಿ ವಿಧಾನಗಳೊಂದಿಗೆ ನವ ದೇವಿಯರ ಪೂಜೆ ಮಾಡಿ, ನಾಡಿನ ಸಮಸ್ತ ಜನತೆಗೆ ಆರೋಗ್ಯ, ಐಶ್ವರ್ಯ, ಸಮೃದ್ಧವಾದ ಮಳೆ, ಬೆಳೆ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ’ ಎಂದರು.
ಪೂಜಾ ಕಾರ್ಯಕ್ರಮದಲ್ಲಿ ಸೂರಜ್ ಫೌಂಡೇಶನ್ ಅಧ್ಯಕ್ಷೆ ಸುಜಾತ ಮುನಿರಾಜು, ಪುತ್ರಿ ಸ್ವಪ್ನ ಮತ್ತು ಅಳಿಯ ಬಿ.ಎಸ್.ಅನಿಲ್ ಕುಮಾರ್ ಪಾಲ್ಗೊಂಡಿದ್ದರು.