ಪ್ರಗತಿಯ ಕನಸು ಕಂಡ ಮೇರು great-leader
ಕೋಲಾರ: ಸಮ ಸಮಾಜ ನಿರ್ಮಾಣದ ಪರಿಕಲ್ಪನೆ ಸಾಕಾರಗೊಳ್ಳಲು ಶಿಕ್ಷಣ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಮುಖ್ಯ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಅಲ್ಮಾಸ್ ಪರ್ವೀನ್ ತಾಜ್ ತಿಳಿಸಿದರು.great-leader
ನಗರದ ಸೆಂಟ್ಆನ್ಸ್ ಶಾಲೆಯ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಕೇಂದ್ರದಲ್ಲಿ ವಿಜ್ಞಾನ ಶಿಕ್ಷಕರ ಸಂದಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿ, ಅವರ ಬದುಕು ಎಲ್ಲರಿಗೂ ಸ್ಫೂರ್ತಿ ನೀಡುವಂಥದ್ದು. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ಅಂಬೇಡ್ಕರ್ ಅವರ ತತ್ವಾದರ್ಶ ಮೈಗೂಡಿಸಿಕೊಂಡು ದೇಶವನ್ನು ಪ್ರಗತಿಯತ್ತ ಮುನ್ನಡೆಸಬೇಕು ಎಂದರು.
ಶಿಕ್ಷಣಾಧಿಕಾರಿ ಡಾ.ವೀಣಾ ಮಾತನಾಡಿದರು. ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಶಂಕರೇಗೌಡ, ವಿಷಯ ಪರಿವೀಕ್ಷಕ ಸಮೀವುಲ್ಲಾ, ಡಿಡಿಪಿಐ ಕಚೇರಿಯ ಚಂದ್ರಶೇಖರ್, ಕೋಲಾರ ಜಿಲ್ಲಾ ಪ್ರೌಢ ಶಾಲಾ ವಿಜ್ಞಾನ ಶಿಕ್ಷಕರ ಸಂದ ಶ್ರೀನಿವಾಸ ಗೌಡ, ಉಪಪ್ರಾಂಶುಪಾಲೆ ಶಶಿ ವಧನ, ವೆಂಕಟರವಣಪ್ಪ, ಅಮರೇಶ್ ಬಾಬು, ಮುನಿರಾಜು, ಎಂ.ಬಿ.ಶ್ವೇತಾ ಇದ್ದರು.