ಸಿದ್ದಾಪುರದಲ್ಲಿ ಹಮ್ಮಿಕೊಂಡಿದ್ದ ಕೆಜಿಬಿವಿ ಶಾಲೆಯ ಮುಖ್ಯಶಿಕ್ಷಕ ಚಂದ್ರಶೇಖರ ಗಣವಾರಿ ಬೀಳ್ಕೊಡುಗೆ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾ ನ್ಯಾ.ಸಿ.ಚಂದ್ರಶೇಖರ ಉದ್ಘಾಟಿಸಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಶರಣಪ್ಪ ಬಾವಿ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಹನುಮಂತಪ್ಪ ನಾಯಕ, ಹೆಜ್ಜೆ ಗೆಜ್ಜೆ ಮಹಿಳಾ ಸಂಘದ ಅಧ್ಯಕ್ಷೆ ಶಿಲ್ಪಾ ದಿವಟರ್ ಇದ್ದರು.
- ಕೊಪ್ಪಳ ಜಿಲ್ಲಾ ನ್ಯಾ.ಸಿ.ಚಂದ್ರಶೇಖರ ಅಭಿಮತ
ಸಿದ್ದಾಪುರ: ವಿದ್ಯಾರ್ಥಿಗಳ ಜೀವನದ ಯಶಸ್ಸಿನ ಹಿಂದೆ ಶಿಕ್ಷಕರ ಪಾತ್ರ ಮುಖ್ಯವಾದದ್ದು, ನಿವೃತ್ತ ಮುಖ್ಯಶಿಕ್ಷಕ ಚಂದ್ರಶೇಖರ ಗಣವಾರಿ ಅವರು ಬೋಧನೆ ಜತೆ ಸದ್ಗುಣಗಳನ್ನು ಕಲಿಸಿದ್ದಾರೆ ಎಂದು ಕೊಪ್ಪಳ ಜಿಲ್ಲಾ ನ್ಯಾ.ಸಿ.ಚಂದ್ರಶೇಖರ ಹೇಳಿದರು.
ಗ್ರಾಮದ ಎಪಿಎಂಸಿ ಸಮುದಾಯ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕೆಜಿಬಿವಿ ಶಾಲೆಯ ಮುಖ್ಯಶಿಕ್ಷಕ ಹುದ್ದೆಯಿಂದ ನಿವೃತ್ತಿ ಹೊಂದಿದ ಚಂದ್ರಶೇಖರ ಗಣವಾರಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಕ್ಷಕ ಚಂದ್ರಶೇಖರ್ ಪಠ್ಯ ಬೋಧನೆ ಜತೆ ಮಕ್ಕಳಿಗೆ ಸಾಮಾಜಿಕ ಮೌಲ್ಯ ತಿಳಿಸಿಕೊಟ್ಟಿದ್ದಾರೆ. ಮಕ್ಕಳು ಸಹ ಶಿಕ್ಷಕರ ಪರಿಶ್ರಮ ಅರಿತು ಉತ್ತಮ ಪ್ರಜೆಯಾಗಬೇಕು ಎಂದರು.
ಹಳೇ ವಿದ್ಯಾರ್ಥಿಗಳು ಶಿಕ್ಷಕ ಚಂದ್ರಶೇಖರ ಗಣವಾರಿ ಅವರನ್ನು ಸಾರೋಟಿನಲ್ಲಿ ಮೆರವಣಿಗೆ ಮೂಲಕ ಸ್ವಾಗತಿಸಿದರು. ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಸನ್ಮಾನಿಸಲಾಯಿತು.