ಯಳಂದೂರು ತಾಲೂಕಿನ ಕಂದಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು  
ರಾಜ್ಯ

ಟಿಪ್ಪರ್‌ಗೆ ಕಾರು ಡಿಕ್ಕಿಯಾಗಿ ಯುವಕ ಸಾವು

ಯಳಂದೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿ ನಿಂತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ತಾಲೂಕಿನ ಕಂದಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 948 ರಲ್ಲಿ ಬುಧವಾರ ರಾತ್ರಿ ನಡೆದಿದೆ.
ಯಳಂದೂರು ಪಟ್ಟಣದ ನಿವಾಸಿ ಪ್ರಸಾದ್ (24) ಮೃತ ವ್ಯಕ್ತಿ. ಚೇತನ್ ಹಾಗೂ ರಾಜೇಶ್ ನಾಯಕ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಹರ್ಷ, ಚಂದು, ದುಂಡ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಐವರು ಕಾರಿನಲ್ಲಿ ಯಳಂದೂರಿನಿಂದ ತೆರಳುತ್ತಿದ್ದ ಸಂದರ್ಭದಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.