ಆಹಾರ ಸಚಿವ ರಿಜ್ವಾನ್ ಅರ್ಷದ್  
ರಾಜ್ಯ

ಸೆ.30ರೊಳಗೆ 2.65 ಕೋಟಿ ಕಾರ್ಡ್​​ದಾರರು ರೇಷನ್ ಕಾರ್ಡ್‌ಗೆ ಆಧಾರ್ ದೃಢೀಕರಣ ಕಡ್ಡಾಯ: ಆಹಾರ ಸಚಿವ ರಿಜ್ವಾನ್ ಅರ್ಷದ್ ಹೇಳಿಕೆ- Aadhar authentication mandatory

ಬೆಂಗಳೂರು: ಬೋಗಸ್ ಕಾರ್ಡ್ ಪತ್ತೆಗೆ, ಪಡಿತರ ಸೋರಿಕೆ ತಡೆಗೆ ರೇಷನ್ ಕಾರ್ಡ್‌ಗೆ ಆಧಾರ್ ದೃಢೀಕರಣ (ಇ-ಕೆವೈಸಿ) ಜೋಡಣೆಗೆ ಆದೇಶ ಮಾಡಿದ್ದೇವೆ. ಸೆ.30ರೊಳಗೆ ಒಟ್ಟು 2.65 ಕೋಟಿ ಫಲಾನುಭವಿಗಳು ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ಸಚಿವರು, ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನಿಖರವಾಗಿ ಅನರ್ಹ ಕಾರ್ಡ್‌ಗಳ ತಿಳಿಯಲಿದೆ. 5 ವರ್ಷದ ಬಳಿಕ ಇ-ಕೆವೈಸಿ ಪ್ರಕ್ರಿಯೆ ನಡೆಯುತ್ತಿದೆ. ಕಾರ್ಡ್‌ಗಳ ರದ್ದತಿ ಆಧಾರದಲ್ಲಿ ಹೊಸದಾಗಿ ಅರ್ಹ ಫಲಾನುಭವಿಗಳಿಗೆ ಕಾರ್ಡ್ ನೀಡಲಾಗುವುದು ಎಂದರು.
ಪೋಷಕಾಂಶ ಪದಾರ್ಥ ಹೊಂದಿರುವ ‘ಇಂದಿರಾ ಕಿಟ್’ ದೊಡ್ಡ ಯೋಜನೆಯಾಗಿದೆ. ಈ ಯೋಜನೆ ಜಾರಿಗೆ ಸಂಬಂಧಿಸಿದಂತೆ ವರ್ಷದಿಂದ ಅಧಿಕಾರಿಗಳು ತಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ಇನ್ನಷ್ಟು ಕಾರ್ಯಗಳು ಆಗಬೇಕಿದೆ. ಆಹಾರ ಧಾನ್ಯಗಳ ಬೆಲೆ ಏರಿಕೆ, ಗುಣಮಟ್ಟ ಕುರಿತು ಸಿಎಂ ಜತೆ ಚರ್ಚಿಸಲಾಗುವುದು. ನಮ್ಮ ಸರ್ಕಾರವು ಹಿಂದೆ ಘೋಷಿಸಿದಂತೆ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಸಚಿವ ರಿಜ್ವಾನ್ ಅರ್ಷದ್ ಸ್ಪಷ್ಟಪಡಿಸಿದರು.