ಲಾರಿಗೆ ಕಾರ ಡಿಕ್ಕಿ :ಓರ್ವ ಸಾವು
- ಲಾರಿಗೆ ಕಾರ ಡಿಕ್ಕಿಯಾದ ಸಾವು
- ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟೂರ ಬಳಿ ಘಟನೆ
- ಮೃತ ವ್ಯಕ್ತಿ ಪುನಾ ಮೂಲದ ವ್ಯಕ್ತಿ
ಲಾರಿಗೆ ಕಾರ ಡಿಕ್ಕಿ: ಓರ್ವ ಸಾವು
ಸಂಕೇಶ್ವರ : ಮುಂದೆ ಹೋಗುತಿದ್ದ ಲಾರಿಗೆ ಹಿಂದಿನಿಂದ ಕಾರೊಂದು ಡಿಕ್ಕಿಯಾದ ಪರಿಣಾಮ ಪೂನಾ ಮೂಲದ ಕಾರಿನಲ್ಲಿದ್ದ ನಾಲ್ವರ ಪೈಕಿ
ಹನುಮಂತ ಪಾಳಯ (೫೫) ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗೋಟೂರ ಗ್ರಾಮದ ಬಳಿ ಗುರುವಾರ ನಡೆದಿದೆ.
ಪೂನಾದಿಂದ ಹುಬ್ಬಳ್ಳಿಗೆ ಹೊರಟಿದ್ದ ಕಾರು ಚಾಲಕನ ಅಜಾಗರೂಕತೆಯಿಂದ ಮುಂದೆ ಹೋಗುತ್ತಿದ್ದ ಲಾರಿಗೆ ಜೋರಾಗಿ ಡಿಕ್ಕಿಯಾದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ.ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗೆ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡ ಸಂಕೇಶ್ವರ ಠಾಣೆಯ ಪೊಲೀಸರು ತಿಳಿಸಿದ್ದಾರೆ.