ಹಾಸನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಟೆನಿಸ್, ವಾಲಿಬಾಲ್ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ ಅರಕಲಗೂಡು ಬಿಜಿಎಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು
- ಹಾಸನದಲ್ಲಿ ಆಯೋಜಿಸಿದ್ದ
- ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಟೆನಿಸ್, ವಾಲಿಬಾಲ್ ಪಂದ್ಯಾವಳಿ
ಅರಕಲಗೂಡು: ಹಾಸನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಟೆನಿಸ್, ವಾಲಿಬಾಲ್ ಪಂದ್ಯಾವಳಿಯಲ್ಲಿ ಪಟ್ಟಣದ ಬಿಜಿಎಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಹಾಸನದ ಸಂತ ಜೋಸೆಫ್ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಬಿಜಿಎಸ್ ಕಾಲೇಜಿನ ತಂಡವು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಟೆನಿಸ್, ವಾಲಿಬಾಲ್ ಪಂದ್ಯಾವಳಿಗೆ ಅರ್ಹತೆ ಗಳಿಸಿದೆ. ಬಾಲಕರ ವಿಭಾಗದಲ್ಲಿಯೂ ಬಿಜಿಎಸ್ ಕಾಲೇಜಿನ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.
ಹಾಸನದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಹಾಗೂ ಸಂಸ್ಥೆಯ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ಹಾಗೂ ಪ್ರಾಂಶುಪಾಲ ಮಹೇಶ್ ಹೊಡೆನೂರು ಅವರು ವಿಜೇತ ಕ್ರೀಡಾಪಟುಗಳನ್ನು ಅಭಿನಂದಿಸಿದ್ದಾರೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಪ್ರದರ್ಶಿಸಿ ಕಾಲೇಜಿನ ಕೀರ್ತಿ ಹೆಚ್ಚಿಸಿರುವ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಆಶಿಸಿದರು.