ಗುಂಡ್ಲುಪೇಟೆ ಟೌನ್ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಜಯಗಳಿಸಿದ ಮದ್ದಾನೇಶ್ವರ ವಿದ್ಯಾಸಂಸ್ಥೆಯ ಕ್ರೀಡಾಪಟುಗಳು ಹಾಗೂ ಶಿಕ್ಷಕರು.
- ಗುಂಡ್ಲುಪೇಟೆ ಟೌನ್ ಹೋಬಳಿ ಮಟ್ಟದ ಕ್ರೀಡಾಕೂಟ
- ಶ್ರೀ ಮದ್ದಾನೇಶ್ವರ ವಿದ್ಯಾಸಂಸ್ಥೆ
ಗುಂಡ್ಲುಪೇಟೆ ಟೌನ್ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಶ್ರೀ ಮದ್ದಾನೇಶ್ವರ ವಿದ್ಯಾಸಂಸ್ಥೆಯ 14 ವರ್ಷದೊಳಗಿನ ಕ್ರೀಡಾಪಟುಗಳು ಸಾಧನೆ ಮಾಡಿದ್ದಾರೆ.
ಬಾಲಕರ ವಿಭಾಗದಲ್ಲಿ 600 ಮತ್ತು 400 ಮೀಟರ್ ಓಟದಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ಬಾಲಕಿಯರ ವಿಭಾಗದಲ್ಲಿ 400 ಮೀ. ಮತ್ತು 100 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಕರ ವಿಭಾಗದ ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಹಾಗೂ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಂಸ್ಥೆ ಅಧ್ಯಕ್ಷರು ಅಭಿನಂದಿಸಿದ್ದಾರೆ.