ವಿಜಯಪುರ ಗಿರಿಜಾಶಂಕರ ಕಲ್ಯಾಣ ಮಂಟಪದಲ್ಲಿ ಪ್ರಗತಿ ಸಂಯುಕ್ತ ಪಿಯು ಕಾಲೇಜು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಡಾ.ಹಿತೈಷಿ, ಎಸ್​.ಕೃಪಾಶಂಕರ್​, ಪ್ರಾಂಶುಪಾಲ ಎಸ್​.ಸುರೇಶ್​ ಇತರರು ಇದ್ದರು. 
ರಾಜ್ಯ

ಒತ್ತಡಮುಕ್ತ ಅಭ್ಯಾಸದಿಂದ ಗುರಿ ಸಾಧನೆ ಸಾಧ್ಯ / VIJAYAPUR

ವಿಜಯಪುರ : ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉನ್ನತ ಗುರಿ ಸಾಧಿಸಲು ಒತ್ತಡಮುಕ್ತ ವಾತಾವರಣದಲ್ಲಿ ಅಭ್ಯಾಸ ಮಾಡುವುದು ಅಗತ್ಯ ಎಂದು ಪ್ರಗತಿ ಪದವಿ ಪೂರ್ವ ಕಾಲೇಜು ಹಳೇ ವಿದ್ಯಾರ್ಥಿ, ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆ ವೈದ್ಯ ಡಾ.ಹಿತೈಷಿ ತಿಳಿಸಿದರು.
ಪಟ್ಟಣದ ಗಿರಿಜಾಶಂಕರ ಕಲ್ಯಾಣ ಮಂಟಪದಲ್ಲಿ ಪ್ರಗತಿ ಸಂಯುಕ್ತ ಪಿಯು ಕಾಲೇಜಿನ ಪ್ರಥಮ ಪಿಯು ನೂತನ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ "ಅರೋರಾ ಸ್ವಾಗತ ಸಮಾರಂಭ' ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರಬಾರದು. ಮಕ್ಕಳಿಗೆ ಯಾವ ೇತ್ರದಲ್ಲಿ ಆಸಕ್ತಿ ಇದೆಯೋ ಆ ೇತ್ರದಲ್ಲಿ ಸಾಧನೆ ಮಾಡಲು ಮುಕ್ತ ಅವಕಾಶ ನೀಡಬೇಕು. ಮಕ್ಕಳನ್ನು ಬೇರೆ ವಿದ್ಯಾರ್ಥಿಗಳೊಂದಿಗೆ ಹೋಲಿಕೆ ಮಾಡಬಾರದು. ಪರೀೆಯಲ್ಲಿ ವಿಫಲರಾದರೂ ಸ್ಥೆ$ರ್ಯ ತುಂಬಬೇಕು. ಸಾಧನೆಗೆ ವಿಪುಲ ಅವಕಾಶಗಳಿವೆ ಎಂದರು.
600ಕ್ಕೆ 600 ಅಂಕಗಳಿಸಿದರೆ ವಿಶೇಷ ಉಡುಗೊರೆ : ಪ್ರಗತಿ ಶಿಕ್ಷಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಎಸ್​.ಕೃಪಾಶಂಕರ್​ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ವರ್ಷದ ದ್ವೀತಿಯ ಪಿಯುಸಿಯಲ್ಲಿ 600ಕ್ಕೆ 600 ಅಂಕಗಳಿಸುವ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ ವಿಶೇಷ ಉಡುಗೊರೆ, 595ಕ್ಕಿಂತ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿಶೇಷ ವಿದ್ಯಾರ್ಥಿ ವೇತನ ನೀಡಲಾಗುವುದು. ವಿದ್ಯಾರ್ಥಿಗಳು ಮೊಬೈಲ್​ಬಳಕೆಯಿಂದ ದೂರವಿದ್ದು ಶಿಸ್ತು ಮತ್ತು ಏಕಾಗ್ರತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಪ್ರತಿಭಾ ಪುರಸ್ಕಾರ ವಿತರಣೆ : ಪ್ರಾಂಶುಪಾಲ ಎಸ್​.ಸುರೇಶ್​ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಎಚ್ಚರಿಕೆ ನೀಡಿದರು. ಕಳೆದ ಸಾಲಿನ ದ್ವೀತಿಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ವಿವಿಧ ಸಾಂಸತಿಕ ಕಲಾ ಪ್ರದರ್ಶನಗಳು ಜರುಗಿದವು.