ಯಾದಗಿರಿಯಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಎನ್ಸಿಒಆರ್ಡಿ ಸಭೆಯಲ್ಲಿ ಡಿಸಿ ರಾಹುಲ್ ಪಾಂಡ್ವೆ ಮಾತನಾಡಿದರು. ಎಸ್ಪಿ ಪೃಥ್ವಿಕ್ ಶಂಕರ್ ಇತರರಿದ್ದರು.
- ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಎಚ್ಚರಿಕೆ
- ಜಿಲ್ಲಾ ಮಟ್ಟದ ಎನ್ಸಿಒಆರ್ಡಿ ಸಭೆ
ಯಾದಗಿರಿ: ಗಾಂಜಾ, ಮಾದಕ ವಸ್ತುಗಳ ಉತ್ಪಾದನೆ ಹಾಗೂ ಸಾಗಣೆಯಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯೂ ಆದ ರಾಹುಲ್ ಪಾಂಡ್ವೆ ಹೇಳಿದರು.
ಕೇಂದ್ರ ಗೃಹ ಮಂತ್ರಾಲಯದ ಸೂಚನೆಯಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಕರೆದಿದ್ದ ಜಿಲ್ಲಾ ಮಟ್ಟದ ಎನ್ಸಿಒಆರ್ಡಿ ಸಭೆಯಲ್ಲಿ ಮಾತನಾಡಿದ ಅವರು, ಮಾದಕ ವಸ್ತುಗಳ (ಗಾಂಜಾ) ಉತ್ಪಾದನೆ, ಬೆಳೆ, ಸಾಗಣೆ ಮತ್ತು ಸೇವನೆ ವಿರುದ್ಧ ಕಾನೂನು ಪ್ರಕಾರ ಪ್ರಕರಣ ದಾಖಲಿಸಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ಎಸ್ಪಿ ಪೃಥ್ವಿಕ್ ಶಂಕರ್ ಮಾತನಾಡಿ, ಮಾದಕ ವ್ಯಸನಿಗಳಿಗೆ ಜಿಲ್ಲಾ ಯಿಮ್ಸ್ ಆಸ್ಪತ್ರೆಯಲ್ಲಿ ಕೌನ್ಸಲಿಂಗ್ ಮಾಡಿಸಲಾಗುತ್ತದೆ. ಮಾದಕ ವಸ್ತು ತಡೆಗಟ್ಟುವ ನಿಟ್ಟಿನಲ್ಲಿ ಚೆಕ್ಪೊಸ್ಟ್, ರೈಲ್ವೆಗಳಲ್ಲಿ ತಪಾಸಣೆ ಒಳಪಡಿಸಲಾಗುತ್ತದೆ ಎಂದರು. ಸಾರ್ವಜನಿಕ ಸ್ಥಳಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಡ್ರಗ್ಸ್ಮುಕ್ತ ಯಾದಗಿರಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಅರಿವು ಮೂಡಿಸುವ ಕಾರ್ಯ ಹಮ್ಮಿಕೊಳ್ಳುವಂತೆ ಸೂಚನೆ ನೀಡಿದರು. ಈ ವೇಳೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.