ಗಣತಿ ಕಾರ್ಯ ಕುಂಠಿತವಾದರೆ ಕ್ರಮ census
ಕೋಲಾರ: ಜಿಲ್ಲೆಯಲ್ಲಿ ಜನಗಣತಿಗೆ ನಿಯೋಜಿಸಲ್ಪಟ್ಟ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ತ್ವರಿತವಾಗಿ ಕೆಲಸ ನಿರ್ವಹಿಸಬೇಕು. ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಎಚ್ಚರಿಕೆ ನೀಡಿದ್ದಾರೆ.census
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜನಗಣತಿಯ ಮನೆಪಟ್ಟಿ ಮತ್ತು ಮನೆಗಣತಿಗೆ ಸಂಬಂಧಿಸಿದಂತೆ ಎಲ್ಲ ಚಾರ್ಜ್ ಹಾಗೂ ನೋಡಲ್ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಎಲ್ಲ ಗಣತಿದಾರರು ಹಾಗೂ ಮೇಲ್ವಿಚಾರಕರು ತಮಗೆ ಹಂಚಿಕೆಯಾಗಿರುವ ಮನೆಪಟ್ಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೂ ಮನೆಪಟ್ಟಿ ಮತ್ತು ಮನೆಗಣತಿ ಪ್ರಗತಿ ಕಡಿಮೆಯಾಗಿದೆ ಎಂದರು.
ಜಿಲ್ಲೆಯ ಪ್ರತಿ ಚಾರ್ಜ್ ಕಚೇರಿಯಲ್ಲಿನ ಜನಗಣತಿ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಮಾಲೂರು, ಬಂಗಾರಪೇಟೆ, ಶ್ರೀನಿವಾಸಪುರ, ಕೆಜಿಎಫ್ ಗ್ರಾಮೀಣ ಭಾಗ ಸೇರಿ ಕೆಲವು ಕಡೆಯಲ್ಲಿ ಎನಿಮರೇಟರ್ಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ ಸೇರಿ ಗಣತಿಯ ಎಲ್ಲ ಚಾರ್ಜ್ ಹಾಗೂ ನೋಡಲ್ ಅಧಿಕಾರಿಗಳು ಇದ್ದರು.