ಬೆಳಗಾವಿ ಕಾಂಗ್ರೆಸ್​ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿದರು. ವಿಶ್ವಾಸ ವೈದ್ಯ, ಲಕ್ಷ$್ಮಣರಾವ ಚಿಂಗಳೆ, ವಿನಯ ನಾವಲಗಟ್ಟಿ ಇತರರಿದ್ದರು. 
ರಾಜ್ಯ

ದಲ್ಲಾಳಿ ಹಾವಳಿ ತಡೆಗೆ ಕ್ರಮ: ಸಚಿವ ಡಾ.ಯತೀಂದ್ರ

ಬೆಳಗಾವಿ: ಮಹಾನಗರ ಪಾಲಿಕೆ, ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರ (ಬುಡಾ) ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನಸಾಮಾನ್ಯರಿಗೆ ಸರ್ಕಾರದ ಯೋಜನೆಗಳ ಸದುಪಯೋಗ ಆಗಬೇಕು. ಮಧ್ಯವರ್ತಿಗಳ ಹಾವಳಿ, ಅಧಿಕಾರಿ, ಸಿಬ್ಬಂದಿ ರ್ನಿಲಕ್ಷದಿಂದ ಕೈತಪ್ಪಬಾರದು. ದಲ್ಲಾಳಿಗಳ ಕಿರಿಕಿರಿ ಕುರಿತು ಸಾರ್ವಜನಿಕರು ಮಾಹಿತಿ ನೀಡಿದರೆ ತಕ್ಷಣ ಕ್ರಮ ಜರುಗಿಸಲಾಗುವುದು ಎಂದರು.
ನಗರದಲ್ಲಿ ಅಕ್ರಮ&ಸಕ್ರಮ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತಾಂತ್ರಿಕ, ದಾಖಲೆಗಳ ಸಮಸ್ಯೆ ಕುರಿತು ಸಂಬಂಧಿಸಿದ ಅಧಿಕಾರಿಗಳ ಜತೆ ಸಭೆ ನಡೆಸಿ ಮಾಹಿತಿ ಪಡೆಯಲಾಗುವುದು. ಅರ್ಜಿದಾರರು ನಿಯಮದ ಪ್ರಕಾರವೇ ಅರ್ಜಿ ಸಲ್ಲಿಸಿದರೂ ವಿಳಂಬವಾಗುತ್ತಿರುವ ವಿಷಯ ಗಮನಕ್ಕೆ ಬಂದಿಲ್ಲ. ಇದೊಂದು ಗಂಭೀರ ವಿಷಯವಾಗಿದ್ದರಿಂದ ಎಲ್ಲ ನಗರ ಸ್ಥಳಿಯ ಸಂಸ್ಥೆಗಳಿಂದ ಮಾಹಿತಿ ಪಡೆದು ಸಮಸ್ಯೆ ಇತ್ಯರ್ಥ ಪಡಿಸಲಾಗುವುದು ಎಂದು ಹೇಳಿದರು.
ಬೆಳಗಾವಿ ಪಾಲಿಕೆ ವ್ಯಾಪ್ತಿಯ ವಾರ್ಡ್​ಗಳ ಸಮಗ್ರ ಅಭಿವೃದ್ಧಿ, ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ವಿಶೇಷ ಯೋಜನೆ ರೂಪಿಸುವ ಜತೆಗೆ ಹೆಚ್ಚುವರಿ ಅನುದಾನ ನೀಡುವ ಕುರಿತು ಕ್ರಮ ವಹಿಸಲಾಗುವುದು. ನಗರದ ಅಭಿವೃದ್ಧಿಯಲ್ಲಿ ರಾಜಕಾರಣ ಮಾಡಲು ಹೋಗುವುದಿಲ್ಲ. ಬೆಳಗಾವಿಯನ್ನು ಬೃಹತ್​ ಮಹಾನಗರ ಪಾಲಿಕೆಯನ್ನಾಗಿ ಮಾಡುವ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗುವುದು. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಸಚಿವರು, ಶಾಸಕರು ಹಾಗೂ ಅಧಿಕಾರಿ, ಸಿಬ್ಬಂದಿ ಕರ್ತವ್ಯ ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಲ್ಲಿ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿಗಳಿಂದ ಜನಸಾಮಾನ್ಯರಿಗೆ ಕಿರಿಕಿರಿ, ಸಂಚಾರ ದಟ್ಟಣೆಗೆ ಕಾರಣವಾದರೆ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಸಿದರು.
ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿ ಕುರಿತು ಅರಿವು ಮೂಡಿಸಬೇಕು. ಸರ್ಕಾರಿ ಸೌಲಭ್ಯ ಅರ್ಹರಿಗೆ ಮುಟ್ಟುತ್ತಿರುವ ಕುರಿತು ಪರಿಶೀಲಿಸಬೇಕು ಎಂದು ಪಕ್ಷದ ಕಾರ್ಯಕರ್ತರ, ಮುಖಂಡರಿಗೆ ಸೂಚಿಸಿದರು. ಶಾಸಕ ವಿಶ್ವಾಸ ವೈದ್ಯ, ಬುಡಾ ಅಧ್ಯಕ್ಷ ಲಕ್ಷ$್ಮಣರಾವ ಚಿಂಗಳೆ, ಕಾಂಗ್ರೆಸ್​ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಇತರರಿದ್ದರು.

ಅಹಿಂದ ನಾಯಕರು ಬೆಳೆಯಲಿ

ಸಾಮಾಜಿಕ, ರಾಜಕೀಯ, ಆರ್ಥಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಹಿಂದ ವರ್ಗದ ಜನರು, ನಾಯಕರು ಬೆಳೆಯಬೇಕು. ಜನಪರವಾಗಿ ಕೆಲಸ ಮಾಡುವವರೇ ನಿಜವಾದ ಅಹಿಂದ ನಾಯಕರಾಗುತ್ತಾರೆ. ಹೀಗಾಗಿ ಅಹಿಂದ ವರ್ಗದ ಎಲ್ಲ ಸಭೆಗಳಲ್ಲಿ ಭಾಗವಹಿಸಿ ಸಂಟನೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
"

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕೈಗೊಳ್ಳುವ ತೀರ್ಮಾನವೇ ಅಂತಿಮ.

— ಡಾ. ಯತೀಂದ್ರ ಸಿದ್ದರಾಮಯ್ಯ ನಗರಾಭಿವೃದ್ಧಿ ಸಚಿವ