ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸಾಧಿಸಿದ್ದರಿಂದ ಹುಮನಾಬಾದ್ನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಸಂಜೆ ಬಿಜೆಪಿ ಮಂಡಲ ವತಿಯಿಂದ ನಡೆದ ವಿಜಯೋತ್ಸವದಲ್ಲಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಮಾತನಾಡಿದರು. ಜಿಲ್ಲಾಧ್ಯ ಸೋಮನಾಥ ಪಾಟೀಲ್, ಶಿವಾನಂದ ಮಂಠಾಳಕರ, ಬಸವರಾಜ ಆರ್ಯ, ಪ್ರಭಾಕರ ನಾಗರಾಳೆ, ಅನೀಲ ಪಸರ್ಗಿ, ಗಿರೀಶ ತುಂಬಾ ಇತರರಿದ್ದರು.
- ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ
- ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ
ಹುಮನಾಬಾದ್: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪ ಸಾಧಿಸಿದ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಸೋಮವಾರ ಸಂಜೆ ಬಿಜೆಪಿ ಮಂಡಲ ವತಿಯಿಂದ ವಿಜಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು.
ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ನೇತೃತ್ವದಲ್ಲಿ ಪದ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಶಾಸಕ ಪಾಟೀಲ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ದೃಢ ನಾಯಕತ್ವ ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡಿದ ಆಡಳಿತ ಶೈಲಿಗೆ ಜನತೆ ನೀಡಿದ ಬೆಂಬಲವೇ ಈ ಫಲಿತಾಂಶಗಳಲ್ಲಿ ಪ್ರತಿಬಿಂಬವಾಗಿದೆ. ಬದಲಾವಣೆಗೆ ಮತ ನೀಡಿದ ಜನರ ಆಶಯಗಳು ಸ್ಪಷ್ಟವಾಗಿ ವ್ಯಕ್ತವಾಗಿದ್ದು, ಸುಶಾಸನದ ದಿಸೆಯಲ್ಲಿ ಹೊಸ ಭರವಸೆ ಮೂಡಿಸಿದೆ ಎಂದು ಹೇಳಿದರು.
ಪದ ಜಿಲ್ಲಾಧ್ಯ ಸೋಮನಾಥ ಪಾಟೀಲ್, ಮುಖಂಡರಾದ ಶಿವಾನಂದ ಮಂಠಾಳಕರ, ಬಸವರಾಜ ಆರ್ಯ, ಪ್ರಭಾಕರ ನಾಗರಾಳೆ, ಅನೀಲ ಪಸರ್ಗಿ, ಗಿರೀಶ ತುಂಬಾ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
"
ದೇಶದ ಅಭಿವೃದ್ಧಿಯಲ್ಲಿ ಹಾಗೂ ರಣೆಯಲ್ಲಿ ಪ್ರಧಾನಿ ಮೋದಿಯವರ ದಿಟ್ಟ ನಿರ್ಧಾರ ಹಾಗೂ ಬಿಜೆಪಿ ಸರ್ಕಾರಗಳ ಜನಪರ ಯೋಜನೆಗಳು ಮತ್ತು ಕಾರ್ಯಕರ್ತರ ನಿರಂತರ ಪರಿಶ್ರಮದಿಂದ ದೇಶದಾದ್ಯಂತ ಪದ ಮೇಲಿನ ವಿಶ್ವಾಸ ಹೆಚ್ಚುತ್ತಿದೆ. ಈ ವಿಜಯ ಮುಂದಿನ ದಿನಗಳಲ್ಲಿ ಇನ್ನಷ್ಟು ಬಲಿಷ್ಠ ಸಂಟನೆ ನಿರ್ಮಾಣಕ್ಕೆ ದಾರಿ ಮಾಡಿಕೊಡಲಿದೆ.
— > ಸೋಮನಾಥ ಪಾಟೀಲ್ ಬಿಜೆಪಿ ಜಿಲ್ಲಾಧ್ಯಕ್ಷ