Add your name to the voters' list. 
ರಾಜ್ಯ

ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿ

ಮಧುಗಿರಿ:ಯಾವುದೇ ಅರ್ಹ ಮತದಾರ ಮತ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಕೆ.ಎನ್​.ರಾಜಣ್ಣ ತಿಳಿಸಿದರು.
ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ದೊಡ್ಡದಾಳವಟ್ಟ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ದೇವಸ್ಥಾನ ಸಮಿತಿಯಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಮತದಾರರ ಪಟ್ಟಿಯು ಅತ್ಯಮೂಲ್ಯವಾಗಿದ್ದು, ಮತದಾರರ ಪಟ್ಟಿಯಿಂದ ಹೊರಗುಳಿದರೆ ಯಾವುದೇ ಚುನಾವಣೆಯಲ್ಲಿ ಮತ ಹಾಕಲು ಸಾಧ್ಯವಾಗುವುದಿಲ್ಲ. ನೀವು ಯಾರಿಗಾದರೂ ಮತ ಹಾಕಿಕೊಳ್ಳಿ, ಆದರೆ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿ. ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಸರ್ಕಾರದ ಯಾವುದೇ ಸೌಲಭ್ಯಗಳು ನಿಮಗೆ ಸಿಗುವುದಿಲ್ಲ. ಇದರ ಬಗ್ಗೆ ಈಗಾಗಲೇ ಪಕ್ಷದ ಹಲವು ಮುಖಂಡರಿಗೆ ಸೂಚನೆ ನೀಡಿದ್ದು, ಜು.20ರೊಳಗೆ ಮತದಾರರ ಪಟ್ಟಿಗೆ ಹೆಸರು ಸೇರಿಸುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ರಾಜ್ಯದ ವಿವಿಧ ಕಡೆ, ಮಳೆಯಾಗುತ್ತಿದ್ದು, ನಮ್ಮ ಜಿಲ್ಲೆಯಲ್ಲೂ ಮಳೆಯಾಗುವ ಸಂಭವವಿದೆ. ಈ ಹಿಂದೆ ಬರಗಾಲ ಬಂದರೆ ಊಟಕ್ಕೆ ಹೆದರಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅನ್ನಭಾಗ್ಯದಿಂದ ಯಾರೂ ಸಹ ಊಟಕ್ಕೆ ಪರದಾಡುವ ಪರಿಸ್ಥಿತಿ ಇಲ್ಲ. ಆದರೆ ಬರಗಾಲ ಬಂದರೆ ದನ ಕರುಗಳಿಗೆ ಮೇವಿಗೆ ತೊಂದರೆಯಾಗುತ್ತದೆ. ಹಿಂದೆ ಬರಗಾಲದ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್​ನಿಂದ ಗೋಶಾಲೆ ಪ್ರಾರಂಭಿಸಿ ಗೋಶಾಲೆಗೆ ಬರುವ ರೈತರಿಗೆ ಉಚಿತವಾಗಿ ಊಟ ನೀಡಲಾಗಿತ್ತು ಎಂದು ಸ್ಮರಿಸಿದ ಅವರು, ಪ್ರಸ್ತುತ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಜಯವಾಗಲಿ ನದಿಯಲ್ಲಿ ಈ ಬಾರಿ ಅಂತರ್ಜಲ ಹೆಚ್ಚಾಗಿ ರೈತರಿಗೆ ಅನುಕೂಲವಾಗುತ್ತಿದೆ ಎಂದು ತಿಳಿಸಿದರು.
ದೊಡ್ಡದಾಳವಟ್ಟ ಶ್ರೀ ಲಕ್ಷಿ$್ಮನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಜಾತ್ರೆಗೆ ಆಂಧ್ರಪ್ರದೇಶ ಸೇರಿ ಹೊರ ರಾಜ್ಯಗಳಿಂದ ಹೆಚ್ಚಿನ ಭಕ್ತರು ಆಗಮಿಸಲಿದ್ದು, ಪೊಲೀಸರು ಮತ್ತು ಅಧಿಕಾರಿಗಳು, ಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.